Featured

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ – ಮನನೊಂದು ಗೃಹಿಣಿ ಆತ್ಮಹತ್ಯೆ – Vishwanews24

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ – ಮನನೊಂದು ಗೃಹಿಣಿ ಆತ್ಮಹತ್ಯೆ

ಪಡುಬಿದ್ರಿ: ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿ ನಡೆದಿದೆ.

ಮಮತಾ (42) ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಮೀನು ಹಾಗೂ ಮೀನಿನ ಹೊಟೇಲ್‌ ವ್ಯವಹಾರ ಮಾಡಿಕೊಳ್ಳುತ್ತಿದ್ದ ಬೋಳಾರದ ಮಮತಾ ಅವರನ್ನು 2011ರಲ್ಲಿ ಪಡುಬಿದ್ರಿ ಬೀಡು ನಿವಾಸಿ ಚೇತನ್‌ ಮದುವೆಯಾಗಿದ್ದು, ಚೇತನ್‌ ಆಗಾಗ್ಗೆ ಪತ್ನಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಮಮತಾ ಮಂಗಳೂರಿನಲ್ಲಿರುವ ಅಣ್ಣ ಗಿರೀಶ್‌ ಸುವರ್ಣ ಅವರಿಗೆ ಮೊಬೈಲ್‌ ಕರೆ ಮಾಡಿ ತಿಳಿಸಿದ್ದರು. ತಾನು ಹಣ ಕದ್ದಿರುವುದಾಗಿ ಆಪಾದನೆ ಹೊರಿಸಿ ತನಗೆ ಪತಿ ಚೇತನ್‌ ನೀಡಿದ್ದಾಗಿ ಆಕೆ ದೂರಿಕೊಂಡಿದ್ದಳು. ಆಕೆಯನ್ನು ತಾನು ಸಮಾಧಾನಪಡಿಸಿದ್ದೆ ಎಂದು ಗಿರೀಶ್‌ ಪೊಲೀಸರಿಗೆ ನೀಡಿದ ದೂರಿನ‌ಲ್ಲಿ ತಿಳಿಸಿದ್ದಾರೆ.

ಇನ್ನು ಮಮತಾ ತನ್ನ ತಾಯಿ, ಅಣ್ಣ ಹಾಗೂ ಅಕ್ಕ ಭಾರತಿಗೂ ಗಂಡನ ಮನೆಯಲ್ಲಿ ತಾನು ಅನುಭವಿಸುತ್ತಿದ್ದ ಹಿಂಸೆಯ ಬಗ್ಗೆ ದೂರವಾಣಿ ಮೂಲಕ ತಿಳಿಸುತ್ತಿದ್ದಳು.

ಚಿತ್ರಹಿಂಸೆಯಿಂದಲೇ ತನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ವಿರುದ್ಧ ಕ್ರಮ ಜರಗಿಸುವಂತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

18 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

19 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago