ಪಡುಬಿದ್ರಿ: ಪತಿಯ ಮಾನಸಿಕ, ದೈಹಿಕ ಹಿಂಸೆಯಿಂದಾಗಿ ಸಂಶಯಾಸ್ಪದ ಸಾವಿಗೀಡಾದ ಮಮತಾ ಅವರ ಆತ್ಮಹತ್ಯೆ ಪ್ರಕರಣದ ಆರೋಪಿ ಆಕೆಯ ಪತಿ, ಬೀಡು ನಿವಾಸಿ ಚೇತನ್ ಕುಮಾರ್ ಕೆ. (42)ನನ್ನು ಫೆ. 23ರಂದು ರಾತ್ರಿ ಪಡುಬಿದ್ರಿ ಬೀಚ್ ಬಳಿಯಲ್ಲಿ ಬಂಧಿಸಲಾಗಿದೆ.
ಆತನನ್ನು ಉಡುಪಿಯ ನ್ಯಾಯಾಲಯಕ್ಕೆ ಪಡುಬಿದ್ರಿ ಪೊಲೀಸರು ಶುಕ್ರವಾರ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ಪಡುಬಿದ್ರಿ ಬೀಡು ಬಳಿಯ ನಿವಾಸಿ ಚೇತನ್‌ನನ್ನು 2011ರಲ್ಲಿ ವಿವಾಹವಾಗಿದ್ದ ಮಮತಾ ಅವರಿಗೆ ಪತಿ ಸತತವಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನು ನೀಡುತ್ತಿದ್ದ. ಈ ಕುರಿತಾಗಿ ಆಕೆ ತಮ್ಮ ತಾಯಿ, ಅಕ್ಕ ಹಾಗೂ ಅಣ್ಣನವರಲ್ಲಿ ಹೇಳಿಕೊಳ್ಳುತ್ತಿದ್ದಳು. ಗುರುವಾರ ಕೂಡಾ ಚೇತನ್, ತನ್ನ ಪತ್ನಿ ಮಮತಾ ಹಣ ಕದ್ದಿರುವುದಾಗಿ ಆಪಾದನೆಗಳನ್ನು ಹೊರಿಸಿ ಆಕೆಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದನ್ನು ಬೆಳಗ್ಗೆಯೇ ಅಣ್ಣನವರಿಗೆ ಮೊಬೈಲ್ ಕರೆ ಮಾಡಿ ಮಮತಾ ಹೇಳಿಕೊಂಡಿದ್ದರು. ಸಂಜೆಯ ವೇಳೆಗೆ ಅಡುಗೆ ಮನೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಬಗ್ಗೆ ಮೃತ ಮಮತಾ ಅವರ ಸಹೋದರ ನೀಡಿದ ಸಂಶಯಾಸ್ಪದ ಸಾವಿನ ದೂರಿನಂತೆ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ನಡೆಸಿ ಮಮತಾ ಪತಿ ಚೇತನ್ ಕುಮಾರ್‌ನನ್ನು ಬಂಧಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…