Featured

ಪಡುಬಿದ್ರಿ: ಗೃಹಿಣಿ ಸಂಶಯಾಸ್ಪದ ಸಾವಿನ ಪ್ರಕರಣ : ಪತಿ ಸೆರೆ, 15 ದಿನ ನ್ಯಾಯಾಂಗ ಬಂಧನ – Vishwanews24

ಪಡುಬಿದ್ರಿ: ಗೃಹಿಣಿ ಸಂಶಯಾಸ್ಪದ ಸಾವಿನ ಪ್ರಕರಣ : ಪತಿ ಸೆರೆ, 15 ದಿನ ನ್ಯಾಯಾಂಗ ಬಂಧನ

ಪಡುಬಿದ್ರಿ: ಪತಿಯ ಮಾನಸಿಕ, ದೈಹಿಕ ಹಿಂಸೆಯಿಂದಾಗಿ ಸಂಶಯಾಸ್ಪದ ಸಾವಿಗೀಡಾದ ಮಮತಾ ಅವರ ಆತ್ಮಹತ್ಯೆ ಪ್ರಕರಣದ ಆರೋಪಿ ಆಕೆಯ ಪತಿ, ಬೀಡು ನಿವಾಸಿ ಚೇತನ್‌ ಕುಮಾರ್‌ ಕೆ. (42)ನನ್ನು ಫೆ. 23ರಂದು ರಾತ್ರಿ ಪಡುಬಿದ್ರಿ ಬೀಚ್‌ ಬಳಿಯಲ್ಲಿ ಬಂಧಿಸಲಾಗಿದೆ.

ಆತನನ್ನು ಉಡುಪಿಯ ನ್ಯಾಯಾಲಯಕ್ಕೆ ಪಡುಬಿದ್ರಿ ಪೊಲೀಸರು ಶುಕ್ರವಾರ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ಪಡುಬಿದ್ರಿ ಬೀಡು ಬಳಿಯ ನಿವಾಸಿ ಚೇತನ್‌ನನ್ನು 2011ರಲ್ಲಿ ವಿವಾಹವಾಗಿದ್ದ ಮಮತಾ ಅವರಿಗೆ ಪತಿ ಸತತವಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನು ನೀಡುತ್ತಿದ್ದ. ಈ ಕುರಿತಾಗಿ ಆಕೆ ತಮ್ಮ ತಾಯಿ, ಅಕ್ಕ ಹಾಗೂ ಅಣ್ಣನವರಲ್ಲಿ ಹೇಳಿಕೊಳ್ಳುತ್ತಿದ್ದಳು. ಗುರುವಾರ ಕೂಡಾ ಚೇತನ್‌, ತನ್ನ ಪತ್ನಿ ಮಮತಾ ಹಣ ಕದ್ದಿರುವುದಾಗಿ ಆಪಾದನೆಗಳನ್ನು ಹೊರಿಸಿ ಆಕೆಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದನ್ನು ಬೆಳಗ್ಗೆಯೇ ಅಣ್ಣನವರಿಗೆ ಮೊಬೈಲ್‌ ಕರೆ ಮಾಡಿ ಮಮತಾ ಹೇಳಿಕೊಂಡಿದ್ದರು. ಸಂಜೆಯ ವೇಳೆಗೆ ಅಡುಗೆ ಮನೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಬಗ್ಗೆ ಮೃತ ಮಮತಾ ಅವರ ಸಹೋದರ ನೀಡಿದ ಸಂಶಯಾಸ್ಪದ ಸಾವಿನ ದೂರಿನಂತೆ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ನಡೆಸಿ ಮಮತಾ ಪತಿ ಚೇತನ್‌ ಕುಮಾರ್‌ನನ್ನು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago