ಉಡುಪಿ: ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿಯಲ್ಲಿ ಹಲವಾರು ವರ್ಷಗಳಿಂದ ಟೋಲ್ ಗೇಟ್ ನಿರ್ಮಾಣಗೊಂಡು ಸುಂಕ ವಸೂಲಾತಿಯನ್ನು ಮಾಡುತ್ತ ಬರಲಾಗುತ್ತಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಸ್ತಾನ ಟೋಲ್ ಗೇಟ್‌ನಲ್ಲಿ ಕೋಟ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಿದ್ದು, ಅದರಂತೆ ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಪಂನ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಪಕ್ಷದ ಹಿರಿಯರಾದ ರಮಕಾಂತ್ ಪಡುಬಿದ್ರಿ, ಮುಖಂಡರಾದ ಮಿಥುನ್ ಹೆಗ್ಡೆ ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…