ಪಡುಬಿದ್ರಿ: ಟಿಪ್ಪರ್‌ನ ಡಂಪರ್‌ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರ ಟಿಪ್ಪರ್ ಎಳೆದೊಯ್ದಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದ್ದು, ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗುತ್ತಿದ್ದಂತೆ ವಾಹನದ ವೇಗವನ್ನು ಟಿಪ್ಪರ್ ಚಾಲಕ ಹೆಚ್ಚಿಸಿದ್ದು, ಸಾರ್ವಜನಿಕರು ಎಳೆದಾಡಿ ಹೊಡೆಯಬಹುದು ಎಂಬ ಆತಂಕದಲ್ಲಿ ವೇಗವಾಗಿ ಚಾಲಕ ಟಿಪ್ಪರ್ ಓಡಿಸಿದ್ದಾನೆ.
ಇನ್ನು ಟಿಪ್ಪರ್ ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿರಲಿಲ್ಲ. ಬಳಿಕ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದು ಬೈದು ಸಾರ್ವಜನಿಕರು ನಿಲ್ಲಿಸಿದ್ದು, ಪಡುಬಿದ್ರಿ ಪೊಲೀಸರು ಟಿಪ್ಪರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯವಾಗಿದ್ದು, ಗಾಯಗಳನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.
ಇನ್ನು ಗಾಯಾಳುಗಳಿಂದ ಮಾಹಿತಿ ಪಡೆದಿರುವ ಪೊಲೀಸರು ಕೇಸು ದಾಖಲಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…