ಪಡುಬಿದ್ರಿ : ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿ ಬಸ್ ಚಾಲಕ ಬಸ್ ತಂಗುದಾಣದಲ್ಲಿ ವಿಶ್ರಾಂತಿ ಪಡೆದ ವಿಲಕ್ಷಣ ಘಟನೆ ಗುರುವಾರ ಪಡುಬಿದ್ರಿಯಲ್ಲಿ ನಡೆದಿದೆ.
ಟೈಂ ಕೀಪರ್ ಶರತ್ ಹಾಗೂ ಉಡುಪಿ – ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿ ಅಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ವಿಶ್ರಾಂತಿ ಪಡೆದಿದ್ದಾನೆ.
ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯ ಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಇತರ ವಾಹನ ಸವಾರರು ಚಾಲಕನ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…