Featured

ಪಡುಬಿದ್ರಿ : ಟೋಲ್ ಗೇಟ್ ವಿಚಾರದಲ್ಲಿ ಜನರ ಪರ ಇರುವೆ : ಟೋಲ್ ಗೇಟ್ ರದ್ದತಿ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಭರವಸೆ – vishwanews24

ಪಡುಬಿದ್ರಿ:  ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು‌ ಸರಿಯಲ್ಲ : ಲಕ್ಷ್ಮೀ ಹೆಬ್ಬಾಳಕರ್

ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು- ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು‌ ಸರಿಯಲ್ಲ. ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

ನಾನು ಕೊಟ್ಟ ಮಾತನ್ನು ಎಂದೂ ತಪ್ಪಿದವಳಲ್ಲ. ಕಳೆದ ತಿಂಗಳು ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕಾಲೇಜಿನ ರದ್ದತಿ ಆದೇಶವನ್ನು ವಾಪಸ್ ಪಡೆಯಲಾಗಿದೆ. ಕೊಟ್ಟ ಮಾತಿನಂತೆ ನಡೆದ ಫಲವಾಗಿ ಇಂದು ನೌಕರರು ನೆಮ್ಮದಿಯಿಂದ ಇದ್ದಾರೆ. ಈಗ ಟೋಲ್ ಗೇಟ್ ವಿಚಾರದಲ್ಲಿ ಜನರ ಪರ ಇರುವೆ ಎಂದು ಸಚಿವರು ತಿಳಿಸಿದರು.

ಈ ವೇಳೆ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಮುಖಂಡರಾದ ಪ್ರಸಾದ್ ಕಾಂಚನ್ ಹಾಜರಿದ್ದರು.

ಜನರ ಅಹವಾಲು ಸ್ವೀಕರಿಸಿದ ಸಚಿವೆ:
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿ ನಗರದಲ್ಲಿರುವ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕಿಕ್ಕಿರಿದು ಸೇರಿದ ಜನರಿಂದ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಸಮಾಧಾನಚಿತ್ತದಿಂದ ಅಹವಾಲು ಸ್ವೀಕರಿಸಿ, ಅವರ ಸಮಸ್ಯೆಗಳಿಗೆ ಕಿವಿಯಾದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಅವರಿಂದ ಜಿಲ್ಲೆಯ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದರು. ಕಾಂಗ್ರೆಸ್ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

15 minutes ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

3 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

4 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

4 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

4 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

5 hours ago