ಪಡುಬಿದ್ರಿ: ಹೆಜಮಾಡಿ ಹಳೇ ಎಂಬಿಸಿ ರಸ್ತೆ ಟೋಲ್ ಪ್ಲಾಝಾದಲ್ಲಿ ಹೆದ್ದಾರಿ ಟೋಲ್ ಪಾವತಿಸದೇ ತನ್ನ ಕಾರನ್ನು ನುಗ್ಗಿಸಿದ್ದರೂ ಕಾರನ್ನು ತಡೆದ ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿ ಪರಾರಿಯಾದ ಕಾರು ಮಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆ. 6ರಂದು ಪ್ರಕರಣ ದಾಖಲಾಗಿದೆ.
ಬಂಟ್ವಾಳ ಮೂಲದ ಸಲೀಂ ಸುಂಕ ಪಾವತಿಸದೇ ತನ್ನ ಕೆಂಪು ಬಣ್ಣದ ಕಾರನ್ನು ಟೋಲ್ ಗೇಟಲ್ಲಿ ಬೆಳಿಗ್ಗಿನ 9-20ರ ಸುಮಾರಿಗೆ ನುಗ್ಗಿಸಿದ್ದ. ಅದನ್ನು ತಡೆದು ನಿಲ್ಲಿಸಿದ್ದ ಟೋಲ್ ಸಿಬ್ಬಂದಿ ಮೇಲೆ ಕಾರನ್ನು ಅಪಾಯಕಾರಿಯಾಗಿ ಚಲಾಯಿಸಿ ಮುಂದಕ್ಕೊಯ್ದು ನಿಲ್ಲಿಸಿ ಹಿಂದೆ ಮರಳಿ ಬಂದ ಆರೋಪಿಯು ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಕೈಯಿಂದ ಹಾಗೂ ಕೊಡೆಯಿಂದ ಹಲ್ಲೆ ನಡೆಸಿ, ಬೆದರಿಸಿದ ವೀಡಿಯೋ ಜಾಲತಾಣಗಳಲ್ಲೂ ವೈರಲ್ ಆಗಿದೆ.
ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತಾದ ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣ ಆರೋಪಿಯ ಜಾಡು ಹಿಡಿದು ಉಡುಪಿಯತ್ತ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…