ಪಡುಬಿದ್ರಿ : ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕೊಂದು ಟೂರಿಸ್ಟ್ ಬಸ್ಸಿಗೆ ಢಿಕ್ಕಿ ಹೊಡೆದು ಬೈಕಿನಲ್ಲಿದ್ದ ಯುವಕ ರಸ್ತೆಗೆ ಎಸೆಯಲ್ಪಟ್ಟು ಆತನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಇಂದು ಸಂಜೆ ನಡೆದಿದೆ.
ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಇಲ್ಲಿನ ಮಂಗಳೂರು ಕಡೆಗೆ ತೆರಳುವ ಬಸ್ಸು ನಿಲ್ದಾಣದ ಬಳಿ ಹೆದ್ದಾರಿಯಲ್ಲಿ ಖಾಸಗಿ ಟೂರಿಸ್ಟ್ ಬಸ್ಸು ನಿಲ್ಲಿಸಿದ ವೇಳೆ ಹಿಂಬದಿಯಲ್ಲಿದ್ದ ಬೈಕ್ ಬಸ್ಸಿಗೆ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದನು. ಇದೇ ವೇಳೆ ಟ್ಯಾಂಕರ್ ಆತನ ಮೇಲೆ ಹರಿದ ಪರಿಣಾಮ ಟ್ಯಾಂಕರ್ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟನು.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳಪರಿಶೀಲನೆ ನಡೆಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…