ಪಡುಬಿದ್ರಿ : ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ತಂದೆ ಆಸೀಫ್ ಯಾನೆ ಆಸೀಫ್ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
ಆಪದ್ಬಾಂಧವ ಆಸಿಫ್ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಟ್ಕ ನಿವಾಸಿ ಆಸಿಫ್ ಆರೋಪಿ. ಮಗಳ ವೀಡಿಯೊಗಳನ್ನು ವಾಟ್ಸಪ್ ಗ್ರೋಪ್‌ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಆಸಿಫ್ ಪುತ್ರಿ ತೀರ್ಥಹಳ್ಳಿಯ ಸಂಬಂಧಿಕನೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು, ಇದು ಆಸಿಫ್‌ಗೆ ಇಷ್ಟವಿರಲಿಲ್ಲ.ಈ ಹಿನ್ನಲೆ ಯುವಕನನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಲ್ಲದೆ ಇಬ್ಬರ ಮೊಬೈಲ್ ಕಸಿದುಕೊಂಡು ಅದರಲ್ಲಿದ್ದ ವೀಡಿಯೊ ಮತ್ತು ಫೋಟೊಗಳನ್ನು ತನ್ನ ಮೊಬೈಲ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಬಳಿಕ ಅವುಗಳನ್ನು ವಾಟ್ಸಪ್ ಗ್ರೂಪ್‌ಗಳು ಸೇರಿ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಕೆಗೆ ಮತ್ತು ಪುತ್ರಿಗೆ ಹಲ್ಲೆಯನ್ನೂ ಮಾಡಿದ್ದಾನೆ. ಈ ಕುರಿತಾಗಿ ಪತ್ನಿಯು ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…