ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಲ ದಿನಗಳಿಂದ ಸುರಿಯುತ್ತಿರುವ ಅತಿಯಾದ ಗಾಳಿ ಮಳೆಯಿಂದಾಗಿ ವಿಪರೀತ ಕಡಲ್ಕೊರೆತ ಉಂಟಾಗುತ್ತಿದ್ದು ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ ಕಾಮಗಾರಿ ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಸೂಚಿಸಿ ಕಡಲ್ಕೊರೆತದ ಶಾಶ್ವತ ಪರಿಹಾರಕ್ಕೆ ಅನುದಾನ ಮಂಜೂರು ಮಾಡುವಂತೆ ಮೀನುಗಾರಿಕಾ ಸಚಿವರ ಬಳಿ ಮಾತನಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಹೇಮಚಂದ್ರ, ಸದಸ್ಯರಾದ ವಿದ್ಯಾ ಶ್ರೀ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ ಹಾಗೂ ಕಾಪು ತಹಶೀಲ್ದಾರರಾದ ಪ್ರತೀಭಾ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೋಭಾ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…