ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾರೆ.
ಮೃತರನ್ನು ಮಂಜುನಾಥ ಬೈಲಪ್ಪ ಮುರಗಾಲಿ (21) ಎಂದು ಗುರುತಿಸಲಾಗಿದೆ. ಇವರು ಕಾರ್ಕಳ ಕಡೆಯಿಂದ ಸುರತ್ಕಲ್ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ರಾತ್ರಿ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಪಾರ್ಕಿಂಗ್ ಲೈಟ್ ಅಥವಾ ಇಂಡಿಕೇಟರ್ ಅಳವಡಿಸದೆ, ಇತರೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರಲಿಲ್ಲ ಎನ್ನಲಾಗಿದೆ. ಇದರಿಂದ ಕತ್ತಲಿನಲ್ಲಿ ಲಾರಿ ಗಮನಕ್ಕೆ ಬಾರದೆ ಸ್ಕೂಟರ್ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಮೃತ ಮಂಜುನಾಥ ಅವರು ಮೂಲತಃ ರಾಯದುರ್ಗ ದವರಾಗಿದ್ದು, ಸುರತ್ಕಲ್‌ನ ಕೋಡಿಕರೆ ಪರಿಸರದಲ್ಲಿ ವಾಸವಾಗಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ಒಂದು ವರ್ಷದ ಹಿಂದೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮುಂಬರುವ ನವೆಂಬರ್‌ನಲ್ಲಿ ಅವರ ವಿವಾಹ ನಡೆಯಬೇಕಿತ್ತು ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್…
ವಿಜಯ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ ಬೆಂಗಳೂರು: ನಟ ದುನಿಯಾ…
ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…
ಮಂಗಳೂರು: ಫಳ್ನೀರ್ ನಲ್ಲಿರುವ ಬ್ಲಿಂಕ್ ಇಟ್ ಮಳಿಗೆಗೆ ಅರೋಗ್ಯ ಇಲಾಖೆ ದಾಳಿ ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್ ಮಾಡಿದ…
ಉಡುಪಿ ಪಿ.ಒ.ಪಿ / ರಾಸಾಯನಿಕ ಬಳಸಿ ಗಣೇಶ ವಿಗ್ರಹಗಳ ತಯಾರಿ, ಮಾರಾಟ ನಿಷೇಧ ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ…
ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ :ವಿಚ್ಛೇದನ ಬೆನ್ನಲ್ಲೇ ವಿಜಯ್ ಪೋಸ್ಟ್ ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್ ಮತ್ತು…