ಉಡುಪಿ: ಕಳವು ಮತ್ತು ಕದ್ದ ಸೊತ್ತುಗಳನ್ನು ಸ್ವಾಧೀನ ಇರಿಸಿಕೊಂಡಿದ್ದ ಆರೋಪದ ಮೇಲೆ ಬಂಧಿತನಾಗಿ ಜಾಮೀನಿನ ಮೇಲೆ ನ್ಯಾಯಾಂಗ ಬಂಧನದಿಂದ ಹೊರ ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಏಳು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಮೈಸೂರು ಜಿಲ್ಲೆಯ ಉದಯಗಿರಿ ಶಾಂತಿನಗರ ಆರನೇ ಕ್ರಾಸ್ ನಿವಾಸಿ ಫೈರೋಜ್ ಖಾನ್ ಎಂಬಾತನನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
2017 ರಲ್ಲಿ ಈತನ ವಿರುದ್ಧ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 2018 ರಲ್ಲಿ ಜಾಮೀನಿನಲ್ಲಿ ಬಿಡುಗಡೆಯಾದ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿದ್ದನು. ಕೇರಳ ರಾಜ್ಯದಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ಪಡೆದ ಪಡುಬಿದ್ರೆ ಠಾಣೆಯ ಪೊಲೀಸರು ಕಲ್ಲಿಕೋಟೆಯಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹೆಡ್ ಕಾನ್‌ಸ್ಟೆಬಲ್ ಗಳಾದ ದೇವರಾಜ್ ಮತ್ತು ರಾಘು ಶೆಟ್ಟಿ ಅವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…