Featured

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್

ಉಡುಪಿ: 2002ರಲ್ಲಿ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ.

ಮಹಾರಾಷ್ಟ್ರದ ಪುಣೆಯ ಬೋರ್ ನಿವಾಸಿ ವಿಲಾಸ್ ಶಿಂಧೆ ಬಂಧಿತ ಅಪರಾಧಿ.

ಘಟನೆ ಹಿನ್ನೆಲೆ:

2002ರ ಸೆಪ್ಟೆಂಬರ್ 07 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮಿನಿ ಗೂಡ್ಸ್ ಲಾರಿ ಚಲಾಯಿಸಿಕೊಂಡು ಬಂದಿದ್ದ ವಿಲಾಸ್ ಶಿಂಧೆ, ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಶಾಲಾ ಬಾಲಕನಿಗೆ ಡಿಕ್ಕಿ ಹೊಡೆದಿದ್ದ. ಅಪಘಾತದ ತೀವ್ರತೆಗೆ ಬಾಲಕ ಮೃತಪಟ್ಟಿದ್ದ.

ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಾಲಕನಿಗೆ 3 ತಿಂಗಳ ಜೈಲು ಶಿಕ್ಷೆ ಹಾಗೂ 1,000 ರೂ. ದಂಡ ವಿಧಿಸಿ ತೀರ್ಪು ನೀಡಿತ್ತು.

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಪರಾಧಿ:

ನ್ಯಾಯಾಲಯ ತೀರ್ಪು ನೀಡಿದ ಬಳಿಕ ಅಪರಾಧಿ ವಿಲಾಸ್ ಶಿಂಧೆ ಯಾರಿಗೂ ಸಿಗದೆ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ (LPC) ವಾರಂಟ್ ಹೊರಡಿಸಿತ್ತು.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ ವಿಶೇಷ ಕಾರ್ಯಾಚರಣೆ ನಡೆಸಿದ ಪಡುಬಿದ್ರಿ ಪೊಲೀಸ್ ತಂಡವು, ಆರೋಪಿ ಮಹಾರಾಷ್ಟ್ರದ ಪುಣೆಯಲ್ಲಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿರುವ ಮಾಹಿತಿ ಪಡೆದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago