Missing red rubber stamp vector isolated
ಪಡುಬಿದ್ರಿ : ಸುಮಾರು ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳು ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ. 1ರಂದು ಶಿಫಾಶೇಖ್ (25) ಹಾಗೂ ರಿಯಾಜ್ (28) ನಂದಿಕೂರು-ಅಡ್ವೆಯ ಮನೆಯಿಂದ ಉಡುಪಿಗೆ ಮೊಬೈಲ್ ಖರೀದಿಸಿ ಬರುವುದಾಗಿ ಹೇಳಿ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ.
ಇನ್ನು ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮುಂಚೆ ತೀರಿಕೊಂಡಿದ್ದು, ಆ ವೇಳೆ ಬಿಎಎಂಎಸ್ ಕಡೆಯ ವರ್ಷದಲ್ಲಿ ಕಲಿಯುತ್ತಿದ್ದ ಈಕೆಯು ವಿದ್ಯಾಭ್ಯಾಸ ಮೊಟಕುಗೊಳಿಸಿ ರಿಯಾಜ್ ಅವರನ್ನು ವಿವಾಹವಾಗಿದ್ದರು.
ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ – Vishwanews24
ಇನ್ನು ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು ಎಂದು ತಿಳಿದು ಬಂದಿದೆ.
ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲ್ ಮನೆಯಲ್ಲೇ ಇದೆ ಪೊಲೀಸರು ತಿಳಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…