Featured

ಪಡುಬಿದ್ರಿ : ಬಸ್ ಚಾಲಕನಿಗೆ ಹಠಾತ್ ಅನಾರೋಗ್ಯ ; ಧರೆಗೆ ಚಲಿಸಿದ ಬಸ್ಸು, ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಪಡುಬಿದ್ರಿ : ಬಸ್ ಚಾಲಕನಿಗೆ ಹಠಾತ್ ಅನಾರೋಗ್ಯ ;
ಧರೆಗೆ ಚಲಿಸಿದ ಬಸ್ಸು, ಪ್ರಯಾಣಿಕರು ಅಪಾಯದಿಂದ ಪಾರು
ಪಡುಬಿದ್ರಿ : ಖಾಸಗಿ ವೇಗದೂತ ಬಸ್ಸಿನ ಚಾಲಕನಿಗೆ ಅಪಸ್ಮಾರ ಸಂಭವಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಧರಗೆ ಚಲಿಸಿದ ಘಟನೆ ಬುಧವಾರ ಬೆಳಿಗ್ಗೆ ಎರ್ಮಾಳು ತೆಂಕ ಜಾಮಿಯಾ ಮಸೀದಿ ಬಳಿ ಸಂಭವಿಸಿದೆ.

ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ವೇಗದೂತ ಬಸ್ಸಿನ ಚಾಲಕ ಶಂಭು ಮುಲ್ಕಿಯವರು ಎರ್ಮಳು ತೆಂಕ ಸಮೀಪಿಸುತ್ತಿದ್ದಂತೆ ಅವರಿಗೆ ಅಪಸ್ಮಾರ ಸಂಭವಿಸಿದೆ. ಇದೇ ಸಂದರ್ಭ ಬಸ್ಸು ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಧರೆಗೆ ಚಲಿಸಿದೆ. ಈ ಸಂದರ್ಭ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿ, ವಿದ್ಯುತ್ ತಂತಿಗಳು ತುಂಡಾಗಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಅಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ.
ಚಾಲಕ ಶಂಬುರವರು ಚೇತರಿಸುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

15 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

15 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

16 hours ago