ಪಡುಬಿದ್ರಿ : ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರಕ್ಕೆ ಮತ್ತು ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಗಳ ವಿರುದ್ದ ಇಲ್ಲಿ ಪ್ರತಿಭಟನೆಯನ್ನು ನಡೆಸಲು ನಾವೆಲ್ಲ ಸೇರಿದ್ದೇವೆ, ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಅದಕ್ಕೆ ಕಾರಣ ಇಷ್ಟೇ ಮುಂದಿನ ದಿನದಲ್ಲಿ ಇಂಥಹ ಘಟನೆಗಳು ಭಾರತದಲ್ಲಿ ನಡೆಯಬಾರದು ಎಂಬ ನಿಟ್ಟಿನಲ್ಲಿ ಎಲ್ಲೆಡೆ ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಸುತ್ತಾ ಅಧರ್ಮಿಯರಿಗೆ ಎಚ್ಚರಿಕೆಯನ್ನು ನೀಡುತ್ತಿದ್ದೇವೆ. ಅನಿವಾರ್ಯ ಸ್ಥಿತಿ ಬಂದರೆ ಬಾಂಗ್ಲಕ್ಕೂ ತೆರಳಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟಿಸಲು ಮತ್ತು ಹೋರಾಡಲು ಸಿದ್ದ ಎಂದರು.
ಈ ಸಂದರ್ಭ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ರಾಜೇಶ್ ಉಚ್ಚಿಲ, ತಾಲೂಕು ಅಧ್ಯಕ್ಷ ಶಶಿಧರ ಹೆಗ್ಡೆ ಅಡ್ವೆ, ತಾಲೂಕು ಉಪಾಧ್ಯಕ್ಷ ಲೋಕೇಶ್ ಪಲಿಮಾರು, ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಸೂಡಾ, ಪಡುಬಿದ್ರಿ ವಲಯಾಧ್ಯಕ್ಷ ಪ್ರತೀಕ್ ನಂದಿಕೂರು, ಶಿರ್ವ ವಲಯ ಅಧ್ಯಕ್ಷ ರಕ್ಷಿತ್, ಹಿಂದು ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನೀತಾ ಗುರುರಾಜ್, ಶಿವಪ್ರಸಾದ್ ಶೆಟ್ಟಿ ಎರ್ಮಾಳ್, ಕೃಷ್ಣ ಕಂಚಿನಡ್ಕ, ಸುರೇಶ್ ಪೂಜಾರಿ ಪಾದೆಬೆಟ್ಟು, ಪಡುಬಿದ್ರಿ ವಲಯ ಉಪಾಧ್ಯಕ್ಷ ಉಮಾನಾಥ್ ಮೆಂಡನ್, ವಲಯ ಪ್ರಧಾನ ಕಾರ್ಯದರ್ಶಿ ಸುಹಾಸ್ ನಟವರ್ಯ, ಪಲಿಮಾರು ಘಟಕಾಧ್ಯಕ್ಷ ರಾಘವೇಂದ್ರ ಸುವರ್ಣ, ಉಪಾಧ್ಯಕ್ಷ ರಿತೇಶ್ ದೇವಾಡಿಗ, ನಂದಿಕೂರು ಘಟಕಾಧ್ಯಕ್ಷ ನಿತಿನ್ ಶೆಟ್ಟಿ, ಉಪಾಧ್ಯಕ್ಷ ಸುಕೇಶ್ ಕುಲಾಲ್, ಕಂಚಿನಡ್ಕ ಘಟಕಾಧ್ಯಕ್ಷ ಶಂಕರ್, ಉಪಾಧ್ಯಕ್ಷ ಶಿವು ಮತ್ತು ನೂರಕ್ಕೂ ಮಿಕ್ಕಿದ ಕಾರ್ಯಕರ್ತರು ಭಾಗವಹಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…