Featured

ಪಡುಬಿದ್ರಿ: ಬಾಲಕರು ರೈಲು ಹಳಿಗಳ ಕಬ್ಬಿಣದ ಲಾಕ್‌ ತೆಗೆದ ಪ್ರಕರಣ : ಸಮಗ್ರ ತನಿಖೆಗೆ ಸಂಸದ ಕೋಟ ಆಗ್ರಹ – vishwanews24

ಪಡುಬಿದ್ರಿ: ಬಾಲಕರು ರೈಲು ಹಳಿಗಳ ಕಬ್ಬಿಣದ ಲಾಕ್‌ ತೆಗೆದ ಪ್ರಕರಣ : ಸಮಗ್ರ ತನಿಖೆಗೆ ಸಂಸದ ಕೋಟ ಆಗ್ರಹ

ಪಡುಬಿದ್ರಿ: ಅವರಾಲು ಮಟ್ಟು ಪ್ರದೇಶದಲ್ಲಿ ರೈಲು ಹಳಿಗಳ ಕಬ್ಬಿಣದ ಲಾಕ್‌ಗಳನ್ನು ಬಾಲಕರು ತೆಗೆದ ಪ್ರಕರಣದ ಕುರಿತು ರಾಜ್ಯ ಸರಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಉಡುಪಿ -ಚಿಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.

ಅವರಾಲುಮಟ್ಟುವಿನ ಪ್ರಕರಣಕ್ಕೆ ಸಂಬಂಧಿಸಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಘಟನೆಯ ಹಿಂದೆ ಯಾರ ಕೈವಾಡವಿದೆ ಎನ್ನುವುದರ ಕುರಿತಾಗಿ ಉನ್ನತ ಪೊಲೀಸ್ ಅಧಿಕಾರಿಗಳಿಂದ ಸಮಗ್ರ ತನಿಖೆಯಾಗಬೇಕು. ಪ್ರಕರಣಗಳ ಹಿಂದಿನ ಶಕ್ತಿ ಯಾವುದು ಎಂಬುದು ಸೂಕ್ತ ತನಿಖೆಯ ಮೂಲಕವೇ ಹೊರ ಬರಬೇಕು ಎಂದರು.

ಗ್ಯಾಂಗ್‌ಮೆನ್ ವಿರುದ್ಧವಾಗಿ ದಾಖಲಾದ ಪ್ರಕರಣವನ್ನು ಪರಿಶೀಲನೆ ಗೊಳಪಡಿಸಿ ಆತ ನಿರಪರಾಧಿಯಾಗಿದ್ದರೆ, ಆತನ ವಿರುದ್ಧದ ಪ್ರಕರಣಗಳನ್ನು ವಾಪಾಸು ಪಡೆಯಬೇಕು. ಬಾಲಕರನ್ನು ದಂಡ ವಿಧಿಸಿ ಬಿಡಲಾಗಿದೆ ಎಂದು ಅವರು ತಿಳಿಸಿದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಮತ್ತು ಶರಣ್ ಕುಮಾರ್ ಮಟ್ಟು, ಮಂಡಲ ಬಿಜೆಪಿ ವಕ್ತಾರ ನವೀನ್ ಎಸ್.ಕೆ., ರಂಜನ್ ಕೋಟ್ಯಾನ್ ಹರ್ಷಿತ್ ಪೂಜಾರಿ ಆರ್‌ಸಿಎಫ್ ನಿರೀಕ್ಷಕ ಮಧುಸೂದನ್ ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

8 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago