ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್‌ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ದ್ದೇಶಿಸಿರುವ ಟೋಲ್ ಗೇಟ್ ರದ್ದತಿಗೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಗೆ ಟೋಲ್ ನಿರ್ಮಾಣವಾಗುವ ಸ್ಥಳದಲ್ಲಿ ಬುಧವಾರ ನಡೆಯಿತು.
ಪ್ರತಿಭಟನೆಯಲ್ಲಿ ಐನೂರಕ್ಕೂ ಅಧಿಕ ಕಾರ್ಯಕರ್ತರು ಸಾರ್ವಜನಿಕರು ಭಾಗಿಯಾಗಿದ್ದರು.
ಪ್ರತಿಭಟನೆ ಉದ್ದೇಶಿಸಿ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ” ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪ ಸರ್ಕಾರ ಇದ್ದಾಗ ಪಡುಬಿದ್ರಿಯಿಂದ ಕಾರ್ಕಳವರೆಗಿನ ರಸ್ತೆ ನಿರ್ಮಾಣವಾಗಿತ್ತು ಅದೇ ಸಮಯದಲ್ಲಿ ಇದಕ್ಕೆ ಟೋಲ್ ಹಾಕುವ ಯೋಜನೆ ಕೂಡ ಆಗಿತ್ತು ಆದರೆ ಈಗ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಪಯತ್ನವನ್ನು ಟೋಲ್ ಹೋರಾಟದಲ್ಲಿರುವ ಬಿಜೆಪಿ ಪಕ್ಷ ಮಾಡುತ್ತಿದೆ ಎಂದರು.
ಇವತ್ತು ಕಾಂಗ್ರೆಸ್ ಪಕ್ಷದ ಮೇಲೆ ಬಂದಿರುವ ಆರೋಪದಿಂದ ಮುಕ್ತವಾಗಬೇಕೆಂಬ ದೃಷ್ಟಿಯಿಂದ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ಬೆಂಗಳೂರಿಗೆ ನಿಯೋಗ ತೆರಳಿ ರಾಜ್ಯದ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಟೋಲ್ ರದ್ದು ಮಾಡಲು ಮನವಿ ಸಲ್ಲಿಸಲಾಗುವುದು ಎಂದರು.
ಪಡುಬಿದ್ರಿ ಭಾಗದಲ್ಲಿ ಯಾವುದೇ ಪ್ರತಿಭಟನೆ ನಡೆದರೂ ಕಾಂಗ್ರೆಸ್ ಪಾರ್ಟಿ ಅದಕ್ಕೆ ಬೆಂಬಲ ನೀಡುತ್ತಾ ಬಂದಿದೆ ಆದರೆ ಬಿಜೆಪಿ ಅದರಲ್ಲಿ ವ್ಯವಹಾರ ನಡೆಸುತ್ತಿದ್ದಾರೆ, ಲ್ಯಾಂಡ್ ಮಾಫಿಯ,ಹಫ್ತಾ ವಸೂಲು,ಕಾಂಟ್ಯಾಕ್ಟ್ ಲಾಭಿ ನಡೆಸುತ್ತಿದ್ದಾರೆಂದು ಆರೋಪ ನಡೆಸಿದರು.ಪ್ರಮುಖರಾದ ಮುನಿಯಾಲ್ ಉದಯ ಶೆಟ್ಟಿ, ದಲಿತ ಮುಖಂಡ ಶೇಖರ್ ಹೆಜ್ಮಾಡಿ,ಮಾತಾಡಿದರು.
ಅಶೋಕ್ ಕುಮಾರ್ ಕೊಡವೂರು,ರಮೇಶ್ ಕಾಂಚನ್,ಬೆಳಪು ದೇವಿ ಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರೀಶ್ ಕಿಣಿ ಮೊದಲದವರು ಇದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…