ಪಡುಬಿದ್ರಿ: ಪಡುಬಿದ್ರಿಯಲ್ಲಿ ವ್ಯಕ್ತಿಯೊಬ್ಬ ಬಾಲಕಿಗೆ ಬಿಸ್ಕತ್ತು ಕೊಡಿಸುವುದಾಗಿ ಆಕೆಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ಹಾಝಿಗಂಝ್ ಅಮ್ದಾಹರದ ನಿವಾಸಿ ಆರೋಪಿ ಮುಫೀಜುಲ್ ಶೇಖ್ (26)ನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಕಾರ್ಮಿಕನಾಗಿರುವ ಆರೋಪಿಯು ಅಲ್ಲೇ ದುಡಿಯುತ್ತಿದ್ದು, ಅದೇ ಮುರ್ಷಿದಾಬಾದ್ ಜಿಲ್ಲೆಯ ದಂಪತಿಯ ಐದು ವರ್ಷದ ಪುತ್ರಿಯನ್ನು ಮಧ್ಯಾಹ್ನದ ವೇಳೆ ಪುಸಲಾಯಿಸಿ ಅದೇ ಕಟ್ಟಡದ ಮೂರನೇ ಮಹಡಿಯಲ್ಲಿನ ತನ್ನ ರೂಮಿಗೆ ಕರೆದೊಯ್ದಿದ್ದ ಆರೋಪಿಯು ಬಾಲಕಿಯನ್ನು ಬಲವಂತವಾಗಿ ಅತ್ಯಾಚಾರಗೈದಿದ್ದ.
ಅನಂತರದಲ್ಲಿ ಬಾಲಕಿಯು ಹೊಟ್ಟೆ ನೋವು ಎನ್ನುತ್ತಾ ಅಳುತ್ತಿದ್ದಳು. ಇದನ್ನು ಗಮನಿಸಿದ ಪೋಷಕರು ಬಾಲಕಿಯನ್ನು ಪಡುಬಿದ್ರಿಯ ಪ್ರಾ.ಆ. ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಪರಿಶೀಲಿಸಿ ಲೈಂಗಿಕ ದೌರ್ಜನ್ಯ ನಡೆದಿರುವ ಸಂಶಯವನ್ನು ವ್ಯಕ್ತಪಡಿಸಿದ್ದರು. ಬಳಿಕ ಬಾಲಕಿಯನ್ನು ಪಡುಬಿದ್ರಿ ಪೊಲೀಸ್ ಠಾಣಾ ಮಹಿಳಾ ಪೇದೆ, ಬಾಲಕಿಯ ತಂದೆ, ತಾಯಿ ಜತೆಗೆ ಉಡುಪಿಯ ಸರಕಾರಿ ಮಕ್ಕಳ ಆಸ್ಪತ್ರೆಗೆ ರವಾನಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಬಾಲಕಿಯ ಮೇಲೆ ಅತ್ಯಾಚಾರ ಆಗಿರುವುದು ಆಸ್ಪತ್ರೆಯಲ್ಲಿ ದೃಢಪಟ್ಟಿದೆ.
ಇನ್ನು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…