Featured

ಪಡುಬಿದ್ರಿ: ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ – Vishwanews24

ಪಡುಬಿದ್ರಿ: ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ

ಪಡುಬಿದ್ರಿ: ಪಡುಬಿದ್ರಿಯಲ್ಲಿ ವ್ಯಕ್ತಿಯೊಬ್ಬ ಬಾಲಕಿಗೆ ಬಿಸ್ಕತ್ತು ಕೊಡಿಸುವುದಾಗಿ ಆಕೆಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಲದ ಮುರ್ಷಿದಾಬಾದ್‌ ಜಿಲ್ಲೆಯ ಹಾಝಿಗಂಝ್ ಅಮ್ದಾಹರದ ನಿವಾಸಿ ಆರೋಪಿ ಮುಫೀಜುಲ್‌ ಶೇಖ್‌ (26)ನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ಪಡುಬಿದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಕಾರ್ಮಿಕನಾಗಿರುವ ಆರೋಪಿಯು ಅಲ್ಲೇ ದುಡಿಯುತ್ತಿದ್ದು, ಅದೇ ಮುರ್ಷಿದಾಬಾದ್‌ ಜಿಲ್ಲೆಯ ದಂಪತಿಯ ಐದು ವರ್ಷದ ಪುತ್ರಿಯನ್ನು ಮಧ್ಯಾಹ್ನದ ವೇಳೆ ಪುಸಲಾಯಿಸಿ ಅದೇ ಕಟ್ಟಡದ ಮೂರನೇ ಮಹಡಿಯಲ್ಲಿನ ತನ್ನ ರೂಮಿಗೆ ಕರೆದೊಯ್ದಿದ್ದ ಆರೋಪಿಯು ಬಾಲಕಿಯನ್ನು ಬಲವಂತವಾಗಿ ಅತ್ಯಾಚಾರಗೈದಿದ್ದ.

ಅನಂತರದಲ್ಲಿ ಬಾಲಕಿಯು ಹೊಟ್ಟೆ ನೋವು ಎನ್ನುತ್ತಾ ಅಳುತ್ತಿದ್ದಳು. ಇದನ್ನು ಗಮನಿಸಿದ ಪೋಷಕರು ಬಾಲಕಿಯನ್ನು ಪಡುಬಿದ್ರಿಯ ಪ್ರಾ.ಆ. ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಪರಿಶೀಲಿಸಿ ಲೈಂಗಿಕ ದೌರ್ಜನ್ಯ ನಡೆದಿರುವ ಸಂಶಯವನ್ನು ವ್ಯಕ್ತಪಡಿಸಿದ್ದರು. ಬಳಿಕ ಬಾಲಕಿಯನ್ನು ಪಡುಬಿದ್ರಿ ಪೊಲೀಸ್‌ ಠಾಣಾ ಮಹಿಳಾ ಪೇದೆ, ಬಾಲಕಿಯ ತಂದೆ, ತಾಯಿ ಜತೆಗೆ ಉಡುಪಿಯ ಸರಕಾರಿ ಮಕ್ಕಳ ಆಸ್ಪತ್ರೆಗೆ ರವಾನಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಬಾಲಕಿಯ ಮೇಲೆ ಅತ್ಯಾಚಾರ ಆಗಿರುವುದು ಆಸ್ಪತ್ರೆಯಲ್ಲಿ ದೃಢಪಟ್ಟಿದೆ.

ಇನ್ನು ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

17 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago