ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಬಂಧಿತ ಆರೋಪಿ.
ಈತ ಎ.18ರಂದು ಪಡುಬಿದ್ರಿ ಶ್ರೀನಾರಾಯಣ ಗುರು ಮಂದಿರದ ಬಳಿ ಮುಲ್ಕಿ ಕಾರ್ನಾಡಿನ ನಿವಾಸಿ ವಾಸುದೇವ ಶೆಟ್ಟಿಗಾರ್ ಎಂಬವರು ನಿಲ್ಲಿಸಿದ ಬೈಕ್‌ನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ:
ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯ ಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಂತೆ ಪಡುಬಿದ್ರಿ ಪೊಲೀಸ್ ಠಾಣಾ ಎಸ್ಸೈಗಳಾದ ಸಕ್ತಿವೇಲು ಈ. ಮತ್ತು ಅನಿಲ್ ಕುಮಾರ್ ಟಿ.ನಾಯಕ್ ನೇತೃತ್ವದ ವಿಶೇಷ ತಂಡ ಆರೋಪಿಯನ್ನು ವಶಕ್ಕೆ ಪಡೆದು, ಆತನಿಂದ ಕಳವು ಮಾಡಿದ 20,000 ರೂ. ಮೌಲ್ಯದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಎಎಸ್ಸೈ ರಾಜೇಶ್ ಪಿ., ಕೃಷ್ಣಪ್ರಸಾದ್, ಅಶ್ವಿನ್ ಕುಮಾರ್, ಸಂದೇಶ್ ಭಂಡಾರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಆರೋಪಿಯನ್ನು ನ್ಯಾಯಾ ಲಯಕ್ಕೆ ಹಾಜರುಪಡಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…