ಪಡುಬಿದ್ರಿ : ಬೋನಿಗೆ ಬಿದ್ದ ಚಿರತೆ : ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ -Vishwanews24
ಪಡುಬಿದ್ರಿ: ಜನವಸತಿ ಪರಿಸರದಲ್ಲಿ ಓಡಾಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಸಾಂತೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಸಾಂತೂರಿನ ರವಿ ಶೆಟ್ಟಿ ಅವರ ಮನೆಯ ತೋಟದಲ್ಲಿ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿದೆ.
ಈ ಚಿರತೆಯು ರವಿ ಶೆಟ್ಟಿಯವರ ಮನೆಯ ಸುತ್ತಮುತ್ತ ಓಡಾಟ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿತ್ತು. ಈ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಇಲ್ಲಿ ಬೋನು ಇಟ್ಟಿದ್ದರು. ಗುರುವಾರ ತಡರಾತ್ರಿ ಹೆಣ್ಣು ಚಿರತೆಯು ಬೋನಿಗೆ ಬಿದ್ದಿದ್ದು ಇಂದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ
ವಲಯ ಅರಣ್ಯಾಧಿಕಾರಿ ಕ್ಲಿಪರ್ಟ್ ಲೋಬೋ, ಅರಣ್ಯ ಅಧಿಕಾರಿಗಳಾದ ಜೀವನದಾಸ್ ಶೆಟ್ಟಿ, ಗುರುರಾಜ್, ಅಭಿಲಾಶ್, ಜಯರಾಮ ಶೆಟ್ಟಿ, ಮಂಜುನಾಥ್ ನಾಯಕ್, ಪರಶುರಾಮ ಉಪಸ್ಥಿತರಿದ್ದರು.
ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ವ್ಯವಸ್ಥೆಯನ್ನು ಅರಣ್ಯಾಧಿಕಾರಿಗಳು ನಡೆಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…