ಪಡುಬಿದ್ರಿ : ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್ ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ.
ಮೃತ ವ್ಯಕ್ತಿಯನ್ನು ಅಭಿಷೇಕ್ ಯಾನೆ ಅಭಿ (32) ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆಯನ್ನು ನಡೆಸುತ್ತಿದ್ದರು.
ಬುಧವಾರ ನಸುಕಿನ ಜಾವ 2.20 ರ ಸಮಾರಿಗೆ ಕಾಪುವಿನಲ್ಲಿ ಕಾರ್ಯಕ್ರಮ ಮುಗಿಸಿ ವಾಪಾಸು ತೆರಳುತ್ತಿದ್ದ ವೇಳೆ ಅವರ ಕಾರು ಎರ್ಮಾಳು ತೆಂಕ ಸೇತುವೆ ಬಳಿ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಅವರನ್ನು ತಕ್ಷಣವೇ ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದರು ತುರ್ತು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಧರಾಶಾಯಿಯಾಗಿ, ಕಾರು ನಜ್ಜುಗುಜ್ಜಾಗಿದೆ. ಈ ಸಂದರ್ಭ ವಿದ್ಯುತ್ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ.
ಮೃತ ಅಭಿಷೇಕ್ ಅವರು ಪಂಪ್ ವೆಲ್ ಗೌಜಿ ಇವೆಂಟ್ಸ್ ಮಾಲಕರಾಗಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿದ್ದರು.
ಘಟನೆ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…