Featured

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ

ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ ನಡೆಯುವ ಹೊರೆಕಾಣಿಕೆ ಮತ್ತು ಹೊರೆಕಾಣಿಕೆ ಮೆರವಣಿಗೆಯ ಕುರಿತು ಸುರತ್ಕಲ್ ಬಂಟರ ಸಂಘದಲ್ಲಿ ಸಭೆಯನ್ನು ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ಸಭೆಯಲ್ಲಿ ಹೊರೆಕಾಣಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ ಮಾತನಾಡಿ, ಎಂಆರ್ ಜಿ ಗ್ರೂಪ್ ನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಅದರ ಪ್ರಯುಕ್ತ ದಕ್ಷಿಣ ಕನ್ನಡ ಉಡುಪಿ ಕಾಸರಗೋಡು ಸಹಿತ ಬೇರೆ ಜಿಲ್ಲೆಗಳಿಂದಲೂ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುವ ದೇವತಾ ಕಾರ್ಯಕ್ಕೆ ಹೊರೆಕಾಣಿಕೆಯನ್ನು ಕಳುಹಿಸಲು ಎಲ್ಲಾ ಬಂಟರ ಸಂಘಗಳಿಗೆ ಮನವಿ ಪತ್ರ‌ಬಂದಿರುತ್ತದೆ. ಈ ನಿಟ್ಟಿನಲ್ಲಿ ಸುರತ್ಕಲ್ ಬಂಟರ ಸಂಘ ಕೂಡ ಬಹಳಷ್ಟು ಮುತುವರ್ಜಿ ವಹಿಸಿ ಇಂದಿನ ಸಭೆಯನ್ನು ಆಯೋಜಿಸಿದ್ದೀರಿ.‌

ಇದನ್ನೂ ಓದಿ:

ಕೆ ಪ್ರಕಾಶ್ ಶೆಟ್ಟಿಯವರ ಮೇಲಿನ ಅಭಿಮಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಿದ್ದು, ಎಲ್ಲರೂ ಎಪ್ರಿಲ್ 26 ರಂದು ಭಾನುವಾರ ಸಂಜೆ 3 ಗಂಟೆಗೆ ನಡೆಯುವ ಹೊರೆಕಾಣಿಕೆ ಮತ್ತು ಹೊರೆಕಾಣಿಕೆ ಮೆರವಣಿಗೆಯಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ವಿನಂತಿಸಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿ ಹಾಗೂ ಪಡುಬಿದ್ರೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ಮಾತನಾಡಿ, ಅನ್ನಸಂತರ್ಪಣೆಗೆ ಬೇಕಾಗುವ ಸಾಮಾಗ್ರಿಗಳ ಕುರಿತು ಮಾಹಿತಿ ನೀಡಿದರು. ಎ. 26 ರಂದು ಭಾನುವಾರದಂದು ಪಡುಬಿದ್ರೆ ಪೇಟೆಯ ಗುಂಡ್ಲಾಡಿ ಕಟ್ಟೆಯಿಂದ ಸಂಜೆ 3 ಗಂಟೆಗೆ ಸರಿಯಾಗಿ ಶೋಭಾಯಾತ್ರೆ ಹೊರಡಲಿದೆ. ಈ ಕಾರ್ಯಕ್ರಮದಲ್ಲಿ ಸುರತ್ಕಲ್ ಬಂಟರ ಸಂಘದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪುರುಷರು, ಮಹಿಳೆಯರು, ಯುವಕರು ಭಾಗವಹಿಸುವಂತೆ ವಿನಂತಿಸಿದರು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ಗಿರೀಶ್ ಎಂ. ಶೆಟ್ಟಿ ಕಟೀಲು, ಸರೋಜ ಟಿ ಶೆಟ್ಟಿ, ರಾಜೇಶ್ವರಿ ಡಿ ಶೆಟ್ಟಿ, ಕಿರಣ್ ಪ್ರಸಾದ್ ರೈ, ಪುಷ್ಪರಾಜ ಶೆಟ್ಟಿ ಕುಡುಂಬೂರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ:

ವೇದಿಕೆಯಲ್ಲಿ ಸಂಘದ ನಿಕಟ ಪೂರ್ವಾಧ್ಯಕ್ಷರಾದ ಲೋಕಯ್ಯ ಎಂ. ಶೆಟ್ಟಿ ಮುಂಚೂರು, ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ, ಸುಧಾಕರ ಎಸ್. ಪೂಂಜ, ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಗುರುಪುರ ಬಂಟರ ಮಾತೃಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

ಉಲ್ಲಾಸ್ ಶೆಟ್ಟಿಯವರು ಸ್ವಾಗತಿಸಿ ಹಸಿರು ಹೊರೆಕಾಣಿಕೆ ಸಮರ್ಪಣೆಯಲ್ಲಿ ಸುರತ್ಕಲ್ ಬಂಟರ ಸಂಘದ ಎಲ್ಲಾ ಸದಸ್ಯರು ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು. ಲೀಲಾಧರ ಶೆಟ್ಟಿ ಕಾರ್ಯಕ್ರಮ‌ ನಿರೂಪಿಸಿ, ವಂದಿಸಿದರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago