Featured

ಪಡುಬಿದ್ರಿ: ಮೂರು ಸೊಸೈಟಿಗಳಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ದಂಪತಿ ವಿರುದ್ಧ ಪ್ರತ್ಯೇಕ ಮೂರು ಪ್ರಕರಣ ದಾಖಲು – Vishwanews24

ಪಡುಬಿದ್ರಿ: ಮೂರು ಸೊಸೈಟಿಗಳಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ದಂಪತಿ ವಿರುದ್ಧ ಪ್ರತ್ಯೇಕ ಮೂರು ಪ್ರಕರಣ ದಾಖಲು

ಪಡುಬಿದ್ರಿ: ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ ಮೂರು ಸೊಸೈಟಿಗಳಲ್ಲಿ ಅಡವಿಟ್ಟ ಲಕ್ಷಾಂತರ ರೂ. ಸಾಲ ಪಡೆದು ಪಾವತಿಸದೆ ಮೋಸ ಮಾಡಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ.

ಆರೋಪಿಗಳನ್ನುಪಡುಬಿದ್ರಿ ಕಂಚಿನಡ್ಕದ ರಾಘವೇಂದ್ರ ಮಠದ ಬಳಿಯ ನಿವಾಸಿ ರಾಜೀವ್ ಹಾಗೂ ಆತನ ಪತ್ನಿ ಸ್ನೇಹಲತಾ ಎಂದು ಗುರುತಿಸಲಾಗಿದೆ.

ಇವರು ಪಡುಬಿದ್ರಿಯ ಎಸ್.ಕೆ.ಜಿ.ಐ. ಕೋ-ಅಪರೇಟಿವ್ ಸೊಸೈಟಿಯಲ್ಲಿ 2022ರ ಸೆ.1ರಿಂದ ಒಟ್ಟು 182 ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ಅಡವಿಟ್ಟು ಸೊಸೈಟಿಗೆ ನಂಬಿಸಿ 8,08,000ರೂ. ಸಾಲವನ್ನು ಪಡೆದಿದ್ದರು. ಈ ಬಗ್ಗೆ ಸಂಶಯಗೊಂಡ ಸೊಸೈಟಿಯವರು 2024ರ ಫೆ.26ರಂದು ಆರೋಪಿಗಳು ಅಡವಿಟ್ಟ ಚಿನ್ನಾಭರಣಗಳ ಪರಿಶೀಲಿಸಿದಾಗ ನಕಲಿ ಎಂಬುದಾಗಿ ಕಂಡು ಬಂದಿದೆ. ಹೀಗೆ ಆರೋಪಿಗಳು 8,08,000ರೂ. ಸಾಲವನ್ನು ಪಡೆದು ಮರುಪಾವತಿಸದೇ ಸೊಸೈಟಿಗೆ ಮೋಸ ಮಾಡಿರುವುದಾಗಿ ದೂರಲಾಗಿದೆ.

ಅದೇ ರೀತಿ ಇವರು ಉಚ್ಚಿಲದ ಎಸ್‌ಸಿಡಿಸಿಸಿ ಬ್ಯಾಂಕ್ ಉಚ್ಚಿಲ ಶಾಖೆಯಲ್ಲಿ 2023ರ ಮಾ.4ರಿಂದ ಒಟ್ಟು 72.200 ಗ್ರಾಂ ತೂಕದ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ ಅಡವಿಟ್ಟು 2,86,000ರೂ. ಸಾಲವನ್ನು ಪಡೆದಿದ್ದರು. ಆರೋಪಿಗಳು ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಡಿ.28 ರಂದು ಏಲಂ ಪ್ರಕ್ರಿಯೆ ನಡೆಸಿದ್ದು, ಬಿಡ್ಡುದಾರ ಬಾಬುರಾಯ ಆಚಾರ್ಯ ಎಂಬವರು 3,18,680ರೂ.ಗೆ ಈ ಚಿನ್ನಾಭರಣಗಳನ್ನು ಪಡೆದಿದ್ದರು. ಬಳಿಕ ಪರಿಶೀಲಿಸಿದಾಗ ಈ ಚಿನ್ನಾಭರಣಗಳು ನಕಲಿ ಎಂದು ದೃಢಪಟ್ಟಿದೆ. ಹೀಗೆ ಆರೋಪಿಗಳು ಸೊಸೈಟಿಗೆ 2,86,000 ಸಾಲವನ್ನು ಪಡೆದು ಮರು ಪಾವತಿಸದೇ ಮೋಸ ಮಾಡಿರುವುದಾಗಿ ದೂರಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಈ ದಂಪತಿ ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ ಒಟ್ಟು 231 ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ 10,29,000ರೂ. ಮತ್ತು ಸೊಸೈಟಿಯ ಸಿಟಿ ಶಾಖೆಯಲ್ಲಿ ಒಟ್ಟು 188.600ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 9,04,100ರೂ. ಸಾಲವನ್ನು ಪಡೆದು ಮರುಪಾವತಿಸದೇ ಬ್ಯಾಂಕಿಗೆ ಮೋಸ ಮಾಡಿರುವುದಾಗಿ ದೂರಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

4 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

5 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

5 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

5 hours ago