ಪಡುಬಿದ್ರಿ: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ 8.15ರ ಸುಮಾರಿಗೆ ಉಚ್ಚಿಲ ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಕಿನ್ನಿಗೋಳಿಯ ರೋನಾಲ್ಡ್ ಡಿಸೋಜ(67) ಎಂದು ಗುರುತಿಸಲಾಗಿದೆ. ಉಚ್ಚಿಲದಿಂದ ಕಾಪು ಕಡೆ ಹೋಗುತ್ತಿದ್ದ ಬೈಕ್ ರಸ್ತೆ ದಾಟುತ್ತಿದ್ದ ರೋನಾಲ್ಡ್ ಡಿಸೋಜ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇವರು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಗಾಯಾಳನ್ನು ಎಸ್‌ಡಿಪಿಐ ಅಂಬುಲೆನ್ಸ್‌ನಲ್ಲಿ ಸಾಮಾಜಿಕ ಕಾರ್ಯಕರ್ತ ಜಲಾಲುದ್ದೀನ್ ಉಚ್ಚಿಲ ಹಾಗೂ ಹನೀಫ್ ಆಸ್ಪತ್ರೆಗೆ ದಾಖಲಿಸಿದ್ದರು.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…