ಪಡುಬಿದ್ರಿ : ಇಲ್ಲಿನ ರಾಜಕೀಯ ಧುರೀಣ, ಸಮಾಜಸೇವಕ ಎಸ್.ಪಿ ಉಮರ್ ಫಾರೂಖ್ ಅವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಕಂಚಿನಡ್ಕ ಎಸ್.ಪಿ. ಕಂಪೌಂಡ್ ನಿವಾಸಿಯಾಗಿರುವ 60 ವರ್ಷದ ಹಾಜಿ ಎಸ್.ಪಿ. ಉಮರ್ ಫಾರೂಖ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಮೃತರು ಪತ್ನಿ, ಮೂರು ಹೆಣ್ಣು, ಒಂದು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಮದ್ಯಾಹ್ನ ಪಡುಬಿದ್ರಿ ಜುಮ್ಮಾ ಮಸೀದಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಧಾರ್ಮಿಕ, ಸಾಂಸ್ಕøತಿಕ, ಶೈಕ್ಷಣಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದ ಉಮರ್ ಫಾರೂಖ್ ಅವರು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿ, ಪಡುಬಿದ್ರಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ನ ಜಿಲ್ಲಾಧ್ಯಕ್ಷರಾಗಿ ಹಾಗೂ ಎಸ್.ವೈ.ಎಸ್ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಇದರ ಜೊತೆಗೆ ಪಡುಬಿದ್ರಿ ಜುಮ್ಮಾ ಮಸೀದಿ ಸದಸ್ಯರಾಗಿದ್ದ ಇವರು, ಜನತಾದಳದಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದರು.
ಇದನ್ನೂ ಓದಿ: ನವರಾತ್ರಿ ಸಂಭ್ರಮ – ಕಟೀಲಿನಲ್ಲಿ ಸೆ.26ರಿಂದ ಬದಲಿ ರಸ್ತೆ ಸಂಚಾರ ; ತಾತ್ಕಾಲಿಕ ಮಾರ್ಪಾಡು : ಎನ್ ಶಶಿಕುಮಾರ್ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…