Featured

ಪಡುಬಿದ್ರಿ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಹಲ್ಲೆ ; ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು – vishwanews24

ಪಡುಬಿದ್ರಿ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪ: ಬಾಲಕರಿಗೆ ಹಲ್ಲೆ ನಡೆಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್  ಮಾಡಿರುವ ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರೆ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪದಲ್ಲಿ ಬಾಲಕರಿಗೆ ಹಲ್ಲೆ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪಲಿಮಾರು ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ ಹೋಗಿದ್ದನು. ಫೆ.15ರಂದು ಮಧ್ಯಾಹ್ನದ ವೇಳೆಗೆ ಇವರಿಬ್ಬರು ಆಟ ಆಡುತ್ತ ರೈಲು ಹಳಿಯ ಬಳಿ ದೊರೆತ ಕಬ್ಬಿಣದ ತುಂಡನ್ನು ಹೆಕ್ಕಿದ್ದರು ಎನ್ನಲಾಗಿದೆ.

ಇದನ್ನು ನೋಡಿದ ಗ್ಯಾಂಗ್‌ಮ್ಯಾನ್ ಬಾಲಕರನ್ನು ಹಿಡಿದು, ಕೋಲಿನಿಂದ ಒಬ್ಬನ ತಲೆಗೆ ಹಾಗೂ ಮತ್ತೋರ್ವನ ಕಾಲಿಗೆ ಹೊಡೆದಿದ್ದಾನೆ. ಅಲ್ಲದೆ ಇಡೀ ಘಟನೆಯ ವೀಡಿಯೋವನ್ನು ಮಾಡಿ, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago