ಪಡುಬಿದ್ರಿ: ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್ ಅಜೀಜ್ ಅವರನ್ನು ವಿವಾಹವಾಗಿದ್ದ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ನ ಮಗ ಹಾಗೂ ಗಂಡನೊಂದಿಗೆ ಗಲ್ಫ್ ರಾಷ್ಟ್ರದಲ್ಲಿದ್ದು, ಕಳೆದ 6 ತಿಂಗಳಿನಿಂದ ಅವರು ಬಡಾ ಗ್ರಾಮದಲ್ಲಿದ್ದರು. ತಾಯಿಯನ್ನು ಕರೆದುಕೊಂಡು ಅಬ್ದುಲ್ ಅಜೀಜ್ ಅವರು ನ. 26ರಂದು ಮಣಿಪಾಲದ ಆಸ್ಪತ್ರೆಗೆ ಹೋಗಿ ಮರಳಿ ಬರುವ ವೇಳೆ ಅಯಿಷಾ ಮನೆಯಲ್ಲಿ ಇರಲಿಲ್ಲ.
ಅಯಿಷಾ ಬಿಳಿ ಮೈಬಣ್ಣ ಹೊಂದಿದ್ದು, ಮುಖದಲ್ಲೊಂದು ಮಚ್ಚೆಯಿದೆ. ಕನ್ನಡಕವನ್ನು ಧರಿಸುತ್ತಾರೆ. 5.2 ಅಡಿ ಎತ್ತರವಿದ್ದು, ಬುರ್ಖಾ ಧರಿಸಿದ್ದ ಅವರು ಮರಾಠಿ, ಹಿಂದಿ, ಇಂಗ್ಲಿಷ್ ಹಾಗೂ ಬ್ಯಾರಿ ಭಾಷೆಯನ್ನು ಮಾತಾಡುತ್ತಾರೆ. ಅವರ ಬಗ್ಗೆ ಯಾರಿಗಾದರೂ ಸುಳಿವು ಲಭಿಸಿದ್ದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ(0820 2555452)ಯನ್ನು ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…