Featured

ಪಡುಬಿದ್ರಿ ವ್ಯಾಪ್ತಿಯಲ್ಲಿ ಪ್ರತಿ ಗುರುವಾರ ವಿದ್ಯುತ್ ಕಡಿತ-ಗ್ರಾಮಸ್ಥರಿಂದ ಮೆಸ್ಕಾಂ ಮುತ್ತಿಗೆ:vishwanews24

ಪಡುಬಿದ್ರಿ ವ್ಯಾಪ್ತಿಯಲ್ಲಿ ಪ್ರತಿ ಗುರುವಾರ ವಿದ್ಯುತ್ ಕಡಿತ-ಗ್ರಾಮಸ್ಥರಿಂದ ಮೆಸ್ಕಾಂ ಮುತ್ತಿಗೆ:vishwanews24

ಪಡುಬಿದ್ರಿ: ಇಲ್ಲಿನ‌ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ನಡ್ಸಾಲ್ ಪಾದೆಬೆಟ್ಟು ಗ್ರಾಮದಲ್ಲಿ ಅನಿಯಮಿತ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತಿರುವುದರ ಬಗ್ಗೆ ಹಾಗೂ ಮೆಸ್ಕಾಂ ಅಧಿಕಾರಿಗಳ ಉಡಾಫೆತನದ ವಿರುದ್ಧ ಇಂದು ಪಡುಬಿದ್ರಿ ಮೆಸ್ಕಾಂ ಕಚೇರಿಗೆ ಪಡುಬಿದ್ರಿ ಗ್ರಾಮಸ್ಥರು ಮುತ್ತಿಗೆ ಹಾಕಿ ಮನವಿ ಮಾಡಿರುವ ಘಟನೆ ನಡೆದಿದೆ.

ವಾರದ ಪ್ರತಿ ಗುರುವಾರ ಬೆಳಿಗ್ಗೆ ಹತ್ತರಿಂದ ಸಂಜೆ ನಾಲ್ಕು ಗಂಟೆಯವರೆಗೆ ಪವರ್ ಕಟ್ ಆಗುತ್ತಿದ್ದು ಈ ಬಗ್ಗೆ ಕರೆ ಮಾಡಿ ವಿಚಾರ ತಿಳಿಯಲು ಪ್ರಯತ್ನಿಸದರೆ ಮೆಸ್ಕಾಂ ಅಧಿಕಾರಿಗಳು ಉಡಾಫೆಯ ಉತ್ತರ ನೀಡಿ ಕರೆ ಕಟ್ ಮಾಡುವುದು ಮಾತ್ರವಲ್ಲದೆ ಗದರಿಸುತ್ತಾರೆ ಎಂದು ಪಡುಬಿದ್ರಿ ಪಂಚಾಯತ್ ಅಧ್ಯಕ್ಷ ರವಿಕುಮಾರ್ ಆರೋಪಿಸಿದ್ದಾರೆ.

ಮೆಸ್ಕಾಂ ಅಧಿಕಾರಿಗಳು ಪ್ರತಿ ಗುರುವಾರ ಪವರ್ ಕಟ್ ಮಾಡುವ ಸಮಯದಲ್ಲಿ ಎಲ್ಲಾ ನಿರ್ವಹಣೆ ಕೆಲಸ ಮಾಡಿದರೆ ಇಂತಹ ಸಮಸ್ಯೆ ಎದುರಾಗಲು ಸಾದ್ಯವಿಲ್ಲ ಮಳೆಗಾಲ ಹೊರತಾಗಿಯೂ ಪವರ್ ಕಟ್ ನಡೆಯುತ್ತಿದ್ದಾಗ ನಿರ್ವಹಣೆ ಮಾಡಬೇಕಿತ್ತು ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಇದೇ ರೀತಿ ವರ್ತಿಸಿದ್ದಲ್ಲಿ ಹೋರಾಟದ ಮುಖಾಂತರ ಮೆಸ್ಕಾಂ ಮುತ್ತಿಗೆ ಹಾಕುವ ಬಗ್ಗೆ ಎಚ್ಚರಿಕೆ ನೀಡಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೆಸ್ಕಾಂ ಅಧಿಕಾರಿ”ಪ್ರಕೃತಿ ವಿಕೋಪ ಹಾಗೂ ಜೋರಾದ ಗಾಳಿ‌ ಮಳೆಯಿಂದಾಗಿ ಈ‌ ರೀತಿಯ ಸಮಸ್ಯೆಯಾಗುತ್ತಿದೆ ಅದಕ್ಕಾಗಿಯೇ ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದು ತಂಡ ನಿರ್ವಹಣೆಯ ಜವಾಬ್ದಾರಿ ನೀಡಲಾಗಿದ್ದು ಮಾತ್ರವಲ್ಲದೆ ಮೆಸ್ಕಾಂ ಡಿ.ಪಿ.ಆರ್ ಪ್ರಾಜೆಕ್ಟ್ ಸಂಬಂಧ ಪಟ್ಟ ಇಲಾಖೆಗೆ ಕಳುಹಿಸಲಾಗಿದ್ದು ಮುಂದಿನ ದಿನಗಳಲ್ಲಿ ಅದು ಸ್ಯಾಂಕ್ಷನ್ ಆದಲ್ಲಿ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

20 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

20 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

21 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

21 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

21 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago