ಪಡುಬಿದ್ರಿ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ನಡ್ಸಾಲ್ ಪಾದೆಬೆಟ್ಟು ಗ್ರಾಮದಲ್ಲಿ ಅನಿಯಮಿತ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತಿರುವುದರ ಬಗ್ಗೆ ಹಾಗೂ ಮೆಸ್ಕಾಂ ಅಧಿಕಾರಿಗಳ ಉಡಾಫೆತನದ ವಿರುದ್ಧ ಇಂದು ಪಡುಬಿದ್ರಿ ಮೆಸ್ಕಾಂ ಕಚೇರಿಗೆ ಪಡುಬಿದ್ರಿ ಗ್ರಾಮಸ್ಥರು ಮುತ್ತಿಗೆ ಹಾಕಿ ಮನವಿ ಮಾಡಿರುವ ಘಟನೆ ನಡೆದಿದೆ.
ವಾರದ ಪ್ರತಿ ಗುರುವಾರ ಬೆಳಿಗ್ಗೆ ಹತ್ತರಿಂದ ಸಂಜೆ ನಾಲ್ಕು ಗಂಟೆಯವರೆಗೆ ಪವರ್ ಕಟ್ ಆಗುತ್ತಿದ್ದು ಈ ಬಗ್ಗೆ ಕರೆ ಮಾಡಿ ವಿಚಾರ ತಿಳಿಯಲು ಪ್ರಯತ್ನಿಸದರೆ ಮೆಸ್ಕಾಂ ಅಧಿಕಾರಿಗಳು ಉಡಾಫೆಯ ಉತ್ತರ ನೀಡಿ ಕರೆ ಕಟ್ ಮಾಡುವುದು ಮಾತ್ರವಲ್ಲದೆ ಗದರಿಸುತ್ತಾರೆ ಎಂದು ಪಡುಬಿದ್ರಿ ಪಂಚಾಯತ್ ಅಧ್ಯಕ್ಷ ರವಿಕುಮಾರ್ ಆರೋಪಿಸಿದ್ದಾರೆ.
ಮೆಸ್ಕಾಂ ಅಧಿಕಾರಿಗಳು ಪ್ರತಿ ಗುರುವಾರ ಪವರ್ ಕಟ್ ಮಾಡುವ ಸಮಯದಲ್ಲಿ ಎಲ್ಲಾ ನಿರ್ವಹಣೆ ಕೆಲಸ ಮಾಡಿದರೆ ಇಂತಹ ಸಮಸ್ಯೆ ಎದುರಾಗಲು ಸಾದ್ಯವಿಲ್ಲ ಮಳೆಗಾಲ ಹೊರತಾಗಿಯೂ ಪವರ್ ಕಟ್ ನಡೆಯುತ್ತಿದ್ದಾಗ ನಿರ್ವಹಣೆ ಮಾಡಬೇಕಿತ್ತು ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಇದೇ ರೀತಿ ವರ್ತಿಸಿದ್ದಲ್ಲಿ ಹೋರಾಟದ ಮುಖಾಂತರ ಮೆಸ್ಕಾಂ ಮುತ್ತಿಗೆ ಹಾಕುವ ಬಗ್ಗೆ ಎಚ್ಚರಿಕೆ ನೀಡಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೆಸ್ಕಾಂ ಅಧಿಕಾರಿ”ಪ್ರಕೃತಿ ವಿಕೋಪ ಹಾಗೂ ಜೋರಾದ ಗಾಳಿ ಮಳೆಯಿಂದಾಗಿ ಈ ರೀತಿಯ ಸಮಸ್ಯೆಯಾಗುತ್ತಿದೆ ಅದಕ್ಕಾಗಿಯೇ ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದು ತಂಡ ನಿರ್ವಹಣೆಯ ಜವಾಬ್ದಾರಿ ನೀಡಲಾಗಿದ್ದು ಮಾತ್ರವಲ್ಲದೆ ಮೆಸ್ಕಾಂ ಡಿ.ಪಿ.ಆರ್ ಪ್ರಾಜೆಕ್ಟ್ ಸಂಬಂಧ ಪಟ್ಟ ಇಲಾಖೆಗೆ ಕಳುಹಿಸಲಾಗಿದ್ದು ಮುಂದಿನ ದಿನಗಳಲ್ಲಿ ಅದು ಸ್ಯಾಂಕ್ಷನ್ ಆದಲ್ಲಿ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್‌ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…