ಪಡುಬಿದ್ರಿ: ಸಾಲ ವಾಪಸು ನೀಡಲಿಲ್ಲ ಎಂದು ಆರೋಪಿಸಿ ಮೂವರು ಯಕ್ಷಗಾನ ಕಲಾವಿದರೊಬ್ಬರಿಗೆ ದೈಹಿಕ ಹಲ್ಲೆ ನಡೆಸಿದ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ನಿವಾಸಿ, ಸಸಿಹಿತ್ಲು ಮೇಳದ ನಿತಿನ್ ಕುಮಾರ್ ಹಲ್ಲೆಗೊಳಗಾದವರು. ಸಚಿನ್ ಅಮೀನ್ ಉದ್ಯಾವರ, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಆರೋಪಿಗಳಾಗಿದ್ದಾರೆ.
ಆರೋಪಿ ಸಚಿನ್ ಹಾಗೂ ಹಲ್ಲೆಗೊಳಗಾದ ನಿತಿನ್ ಇಬ್ಬರೂ ಯಕ್ಷಗಾನ ಕಲಾವಿದರಾಗಿದ್ದು, ಗೆಳೆಯರಾಗಿದ್ದರೂ, ಪಡೆದ ಸಾಲ ಹಿಂದಿರುಗಿಸಿಲ್ಲ ಎನ್ನುವ ಕಾರಣಕ್ಕೆ ನಿತಿನ್‌ನನ್ನು ಪಾವಂಜೆ ಮೇಳದ ಯಕ್ಷ ಕಲಾವಿದನಾಗಿದ್ದ ಆರೋಪಿ ಸಚಿನ್, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಸೇರಿ ಉದ್ಯಾವರದ ಮನೆಯೊಂದರಲ್ಲಿ ಜ. 21ರಂದು ಕಂಬಳದ ಕೋಣಗಳ ಬಾರುಕೋಲಿನ ಮೂಲಕ ಸತತವಾಗಿ ಹಲ್ಲೆಗೈದಿದ್ದರು.
ಬೆತ್ತದಿಂದ ನಿತಿನ್ ಅವರ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದಿದ್ದಾರೆ. ಕಾಲಿನಿಂದ ತುಳಿದು ಕೈಯಿಂದ ಕೆನ್ನೆಗೆ ಹೊಡೆದು ಖಾಲಿ ಬಾಂಡ್ ಪೇಪರ್‌ಗೆ ಬಲಾತ್ಕಾರವಾಗಿ ಸಹಿ ಪಡೆದುಕೊಂಡಿದ್ದಾರೆ. ಸಂಜೆ ವಾಪಸು ಪಡುಬಿದ್ರಿಗೆ ಆರೋಪಿಗಳೇ ಕಳುಹಿಸಿಕೊಟ್ಟಿದ್ದಾರೆ. ಜ. 21ರ ರಾತ್ರಿ ವೇಳೆ ಪುತ್ತೂರಿನಲ್ಲಿ ನಡೆದ ಯಕ್ಷಗಾನಕ್ಕೆ ಹೋಗಿ ಅಲ್ಲಿ ಕೆಲಸ ಮಾಡಿದ್ದ ನಿತಿನ್, ಜ. 22ರಂದು ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಪೊಲೀಸರುಗೆ ದೂರು ನೀಡಿದ್ದಾರೆ. ತನಿಖೆ ಮುಂದುವರಿದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…