ಉಡುಪಿ

ಪಡುಬಿದ್ರಿ ಸೊಸೈಟಿ 88 ಕೋಟಿ ರೂಪಾಯಿ ಸಾಲ ವಿತರಣೆ ಮಾಡಿದೆ 130 ಕೋಟಿ ಠೇವಣಾತಿ ಹೊಂದಿದೆ: : ವೈ ಸುಧೀರ್ ಕುಮಾರ್

ಪಡುಬಿದ್ರಿ ಸೊಸೈಟಿ 88 ಕೋಟಿ ರೂಪಾಯಿ ಸಾಲ ವಿತರಣೆ ಮಾಡಿದೆ 130 ಕೋಟಿ ಠೇವಣಾತಿ ಹೊಂದಿದೆ: : ವೈ ಸುಧೀರ್ ಕುಮಾರ್

ಪಡುಬಿದ್ರಿ : ಸಂಸ್ಥೆಯ ಅಭಿವೃದ್ಧಿಯ ಜೊತೆಗೆ ಸದಸ್ಯರಿಗೆ ಪ್ರೋತ್ಸಾಹ, ರೈತರು ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುವ ಮೂಲಕ ಪಡುಬಿದ್ರಿ ಸಹಕಾರಿ ವ್ಯವಸಾಯನಿಕ ಸೊಸೈಟಿಯು ಜನರ ಸಂಸ್ಥೆಯಾಗಿ ಬೆಳೆದು ನಿಂತಿದೆ ಇಂತಹ ಸೇವೆಯ ಮೂಲಕವೇ ವಾಣಿಜ್ಯ ಬ್ಯಾಂಕುಗಳಿಂದ ವಿಮುಖರಾಗಿ ಜನರು ಸಹಕಾರ ಸಂಸ್ಥೆಗಳತ್ತ ಮುಖ ಮಾಡುವಂತಹಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಯಮಿತ ಬೆಂಗಳೂರು ಹಾಗೂ ದಾಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾಕ್ಟರ್ ಎಂ ಎಂ ರಾಜೇಂದ್ರ ಕುಮಾರ್ ಹೇಳಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಸಂಸ್ಥೆಯ ಅಧ್ಯಕ್ಷ ವೈ ಸುಧೀರ್ ಕುಮಾರ್ ಸೊಸೈಟಿಯು ಪ್ರಗತಿಪಥದಲ್ಲಿ ಸಾಗುತ್ತಿದ್ದು ರೂಪಾಯಿ 130 ಕೋಟಿ ಠೇವಣಾತಿ ಹೊಂದಿದ್ದು 88 ಕೋಟಿ ರೂಪಾಯಿ ಸಾಲ ವಿತರಿಸಲಾಗಿದೆ ಪಲಿಮಾರು ಶಾಖ ಕಟ್ಟಡವು ವಿಶಾಲ ನವಿಕೃತ ಹವಾನಿಯಂತ್ರಿತ ಶಾಖೆಯೊಂದಿಗೆ ವಿಶಾಲವಾದ ಭದ್ರತಾ ಕೊಠಡಿ ಗ್ರಾಹಕರಿಗೆ ಸೌಲಭ್ಯ ಹೊಂದಿದ್ದು ಶಾತೆಯೊಂದಿಗೆ ಅಂಗಡಿ ಕೋಣೆಯನ್ನು ಕೂಡ ಹೊಂದಿದೆ ಇಲ್ಲಿ ಕೃಷಿ ಉಪಕರಣ ಮಾರಾಟ ಈ ಅಶ್ವ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ವಿಭಾಗವನ್ನು ಪ್ರಾರಂಭಿಸುವ ಯೋಜನೆ ಇದೆ ಇದಕ್ಕೆಲ್ಲ ಪಲಿಮಾರು ಗ್ರಾಮಸ್ಥರ ಸಹಕಾರ ಬೇಕಾಗಿದೆ ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಅಖಿಲಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ಚಂದ್ರ ಡಿ ಸುವರ್ಣ, ಡಾ .ಬೆಳಪು ದೇವಿಪ್ರಸಾದ್ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ ಸೊಸೈಟಿಯ ಬೆಳವಣಿಗೆಯ ಬಗ್ಗೆ ಶುಭ ನುಡಿಗಳನ್ನಾಡಿದರು.

ಇದೇ ಸಂಧರ್ಭದಲ್ಲಿ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್ ವಿ ,ಭಾರತ ಕಬ್ಬಡಿ ತಂಡದ ಮಾಜಿ ನಾಯಕ ಶೇಖರ್ ಶೆಟ್ಟಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಸಮಾಜ ಸೇವಕ ಶರಣ್ ಮಟ್ಟು ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್,ಸಹಕಾರ ಸಂಘಗಳ ಉಪನಿಬಂಧಕಿ ಶ್ರೀಮತಿ ಲಾವಣ್ಯ ಕೆ ಆರ್,ಸಹಾಯಕ ನಿಬಂಧಕಿ ಶ್ರೀಮತಿ ಸುಕನ್ಯ,ನಿವೃತ್ತ ಪಲಿಮಾರು ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ವರ ಪೈ,ಪಲಿಮಾರು ಮಹಾಲಿಂಗೇಶ್ವರ ದೇಗುಲದ ಅರ್ಚಕ ಶ್ರೀನಿವಾಸ ಉಡುಪ,ಪಲಿಮಾರು ಸೈಂಟ್ ಪಿಯೂಸ್ ಚರ್ಚ್ ನ ಧರ್ಮಗುರು ಜೆರಾಲ್ಡ್ ಸಂದೀಪ್ ಡಿಮೆಲ್ಲೋ,ಮಾಜಿ ತಾ.ಪ ಸದಸ್ಯ ದಿನೇಶ್ ಕೋಟ್ಯಾನ್, ಡಾ ಪ್ರಭಾ ನಂಬಿಯಾರ್,ಹಾಜಿ ಎಂಪಿ ಶೇಖಬ್ಬ,ದಿನೇಶ್ ಪ್ರಭು,ಅಶೋಕ್ ಶೆಟ್ಟಿ, ಪಲಿಮಾರು ಶಾಖಾ ವ್ಯವಸ್ಥಾಪಕಿ ಶೋಭಾ ಎಚ್ ಪುತ್ರನ್, ಮೊದಲಾದವರು ಉಪಸ್ಥಿತರಿದ್ದರು.
ಪ್ರಕಾಶ್ ಶೆಟ್ಟಿ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿ ,ಗುರುರಾಜ್ ಪೂಜಾರಿ ವಂದಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago