Featured

ಪಡುಬಿದ್ರಿ : ಜಿಲ್ಲಾಧಿಕಾರಿ ಆದೇಶದ ನಡುವೆಯೂ ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯ ವಾಹನಗಳಿಂದ ಸುಂಕ ವಸೂಲಿ  – vishwanews24

ಪಡುಬಿದ್ರಿ : ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ

ಪಡುಬಿದ್ರಿ: ಉಡುಪಿ ಜಿಲ್ಲಾಧಿಕಾರಿಯವರು ಹೆಜಮಾಡಿ ಗ್ರಾಪಂ ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಹಿತ ಟೋಲ್ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರೂ ಅವರ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದೆ.

ಟೋಲ್ ಅಧಿಕಾರಿಗಳು ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ ಮಾಡುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಲ್ ವಿರುದ್ಧದ ಹೋರಾಟ ಸಮಿತಿಯ ಪ್ರಮುಖರಾದ ಸ್ಥಳೀಯ ನಿವಾಸಿ ಗುಲಾಂ ಮುಹಮ್ಮದ್ ಅವರ ಖಾತೆಯಿಂದಲೇ ಹಣ ಸುಲಿಯಲಾಗಿದೆ. ಇದು ಗಮನಕ್ಕೆ ಬಂದ ತಕ್ಷಣ ವಾಹನವನ್ನು ಟೋಲ್ ಗೇಟಲ್ಲೇ ನಿಲ್ಲಿಸಿ ಪ್ರಶ್ನಿಸಿದ್ದಾರೆ.

ಸ್ಥಳಕ್ಕೆ ಬಂದ ಟೋಲ್ ಅಧಿಕಾರಿಗಳು ತಪ್ಪಿನ ಅರಿವಾಗಿ ಹಣವನ್ನು ಮರು ಪಾವತಿಸುವುದಾಗಿ ಹೇಳಿದ್ದಾರೆ. ಸ್ಥಳಕ್ಕೆ ಬಂದ ಪಡುಬಿದ್ರಿ ಎಸ್ಸೈ ಎಂ.ಎಸ್.ಪ್ರಸನ್ನ ಅವರು ಟೋಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿ ಸಹಿತ ಜಿಲ್ಲಾ ಎಸ್ಸಿಯವರಿದ್ದ ಸಭೆಯಲ್ಲಿಯೇ ಸನೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಆದೇಶ ಮಾಡಿದರೂ ಅವರ ಆದೇಶವನ್ನು ಮೀರಿ ಟೋಲ್ ಪಡೆದಿರುವುದು ಸರಿಯಾದ ಕ್ರಮವಲ್ಲ, ಮುಂದೆ ಇದನ್ನು ಮುಂದುವರಿಸಿದ್ದಲ್ಲಿ ಆಗುವ ಅನಾಹುತಗಳಿಗೆ ನಾವು ಜವಾಬ್ದಾರರಲ್ಲ ಎಂಬುದಾಗಿ ಟೋಲ್ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಗುಲಾಂ ಮುಹಮ್ಮದ್, ನಮ್ಮೆಲ್ಲರ ಹೋರಾಟದ ಫಲವಾಗಿ ಸ್ಥಳೀಯ ವಾಹನಗಳಿಗೆ ಟೋಲ್‌ ವಿನಾಯಿತಿ ಇದ್ದರೂ, ಕಳ್ಳ ಮಾರ್ಗದಲ್ಲಿ ಟೋಲ್ ವಸೂಲಿ ನಡೆಸಿದ್ದಾರೆ. ನನ್ನ ಗಮನಕ್ಕೆ ಬಂತು ನಾನು ಪ್ರತಿಭಟಿಸಿದೆ. ಅದೇ ಗಮನಕ್ಕೆ ಬಾರದ ಅದೆಷ್ಟೋ ವಾಹನಗಳಿಂದ ವಸೂಲಿ ನಡೆಸಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಸ್ಥಳೀಯ ವಾಹನ ಸವಾರರು ಎಚ್ಚರಗೊಳ್ಳಬೇಕಾಗಿದೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago