Featured

ಪಡುಬಿದ್ರಿ: ಹೆದ್ದಾರಿಯಲ್ಲೇ ನಿಲ್ಲಿಸಿದ ಬಸ್‌  ಹಿಂಬದಿಗೆ ಕಾರು ಢಿಕ್ಕಿ , ಮಹಿಳೆಗೆ ತೀವ್ರ ಗಾಯ – vishwanews24

ಪಡುಬಿದ್ರಿ: ಯಾವುದೇ ಮುನ್ಸೂಚನೆ ಇಲ್ಲದೆ ಹೆದ್ದಾರಿಯಲ್ಲೇ ನಿಲ್ಲಿಸಿದ ಬಸ್‌  ಹಿಂಬದಿಗೆ ಕಾರು ಢಿಕ್ಕಿ , ಮಹಿಳೆಗೆ ತೀವ್ರ ಗಾಯ

ಪಡುಬಿದ್ರಿ: ಸರ್ವಿಸ್‌ ರಸ್ತೆಗಿಳಿಯದೇ ಹೆದ್ದಾರಿಯನ್ನೇ ಬಳಸಿ ಸಾಗುವ ಚಾಳಿ ಬಸ್‌ಗಳಲ್ಲಿ ಪಡುಬಿದ್ರಿಯಲ್ಲಿ ಸತತವಾಗಿ ಮುಂದುವರಿದಿದ್ದು, ಇದರಿಂದಾಗಿ ಶುಕ್ರವಾರ ಸಂಜೆಯ ವೇಳೆಗೆ ಸಂಭವಿಸಿದ ಅಪಘಾತದಲ್ಲಿ ಕಾರೊಂದು ಬಸ್‌ ಹಿಂಬದಿಗೆ ಢಿಕ್ಕಿಯಾಗಿ ಮಂಗಳೂರು ಮಂಗಳಾದೇವಿ ಪರಿಸರದ ಮಹಿಳೆ ಪುಷ್ಪಲತಾ ಆಚಾರ್ಯ (56) ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ ಇಲ್ಲದೇ ನಿಲ್ಲಿಸಿದ ಪರಿಣಾಮವಾಗಿ ಅದರ ಹಿಂದಿನಿಂದ ಹೆದ್ದಾರಿಯಲ್ಲೇ ಬಂದಿದ್ದ ಕಾರೊಂದು ಬಸ್‌ ಹಿಂಬದಿಗೆ ಢಿಕ್ಕಿಯಾಗಿದೆ.

ಇದೇ ಕಾರಲ್ಲಿ ಮಂಗಳೂರಿನಿಂದ ಉಡುಪಿಯತ್ತ ಹೋಗುತ್ತಿದ್ದ ತಾಯಿ, ಮಗಳು ಹಾಗೂ ಸಂಬಂಧಿಯೋರ್ವರ ಸಹಿತ ಮೂರು ಮಂದಿ ಇದ್ದು ಮುಂದಿನ ಸಾಲಿನಲ್ಲಿ ಚಾಲಕನ ಬದಿಯಲ್ಲೇ ಕುಳಿತಿದ್ದ ಪುಷ್ಪಲತಾ ಅವರ ಕಾಲುಗಳಿಗೆ, ಕೈಗೆ ಹಾಗೂ ಮೂಗಿಗೆ ಗಂಭೀರ ಗಾಯಗಳಾಗಿದ್ದು ಪಡುಬಿದ್ರಿಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪಡುಬಿದ್ರಿ ಪೊಲೀಸರು ಅಪಘಾತ ಸಂಭವಿಸಿದ ತಾಣಕ್ಕೆ ಭೇಟಿಯಿತ್ತಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago