ಪಡುಬಿದ್ರಿ: ಸರ್ವಿಸ್ ರಸ್ತೆಗಿಳಿಯದೇ ಹೆದ್ದಾರಿಯನ್ನೇ ಬಳಸಿ ಸಾಗುವ ಚಾಳಿ ಬಸ್ಗಳಲ್ಲಿ ಪಡುಬಿದ್ರಿಯಲ್ಲಿ ಸತತವಾಗಿ ಮುಂದುವರಿದಿದ್ದು, ಇದರಿಂದಾಗಿ ಶುಕ್ರವಾರ ಸಂಜೆಯ ವೇಳೆಗೆ ಸಂಭವಿಸಿದ ಅಪಘಾತದಲ್ಲಿ ಕಾರೊಂದು ಬಸ್ ಹಿಂಬದಿಗೆ ಢಿಕ್ಕಿಯಾಗಿ ಮಂಗಳೂರು ಮಂಗಳಾದೇವಿ ಪರಿಸರದ ಮಹಿಳೆ ಪುಷ್ಪಲತಾ ಆಚಾರ್ಯ (56) ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ ಇಲ್ಲದೇ ನಿಲ್ಲಿಸಿದ ಪರಿಣಾಮವಾಗಿ ಅದರ ಹಿಂದಿನಿಂದ ಹೆದ್ದಾರಿಯಲ್ಲೇ ಬಂದಿದ್ದ ಕಾರೊಂದು ಬಸ್ ಹಿಂಬದಿಗೆ ಢಿಕ್ಕಿಯಾಗಿದೆ.
ಇದೇ ಕಾರಲ್ಲಿ ಮಂಗಳೂರಿನಿಂದ ಉಡುಪಿಯತ್ತ ಹೋಗುತ್ತಿದ್ದ ತಾಯಿ, ಮಗಳು ಹಾಗೂ ಸಂಬಂಧಿಯೋರ್ವರ ಸಹಿತ ಮೂರು ಮಂದಿ ಇದ್ದು ಮುಂದಿನ ಸಾಲಿನಲ್ಲಿ ಚಾಲಕನ ಬದಿಯಲ್ಲೇ ಕುಳಿತಿದ್ದ ಪುಷ್ಪಲತಾ ಅವರ ಕಾಲುಗಳಿಗೆ, ಕೈಗೆ ಹಾಗೂ ಮೂಗಿಗೆ ಗಂಭೀರ ಗಾಯಗಳಾಗಿದ್ದು ಪಡುಬಿದ್ರಿಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪಡುಬಿದ್ರಿ ಪೊಲೀಸರು ಅಪಘಾತ ಸಂಭವಿಸಿದ ತಾಣಕ್ಕೆ ಭೇಟಿಯಿತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…