ಪಡುಬಿದ್ರಿ: ಉಚ್ಚಿಲ ಭಾಸ್ಕರನಗರದಲ್ಲಿ ಹೊಟೇಲ್ ಕೆಲಸಕ್ಕೆ ತೆರಳುತ್ತಿದ್ದ ಮೊಹಮ್ಮದ್ ಶಿನಾಲ್ ಎಂಬ ಯುವಕನನ್ನು ಕಾರಿನಲ್ಲಿ ಬಂದ ವ್ಯಕ್ತಿಗಳು ಅಪಹರಿಸಲು ಯತ್ನಿಸಿದ ಘಟನೆ ನಡೆದಿದ್ದು ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಮೊಹಮ್ಮದ್ ಶಿನಾಲ್‌ನನ್ನು ಆರೋಪಿಗಳಾದ ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಪಿಲ್ ಹಾಗೂ ಇತರ ಇಬ್ಬರು ಕಾರಿನಲ್ಲಿ ಬಂದು ಉಚ್ಚಿಲದಲ್ಲಿರುವ ಬೆಳಪು ಸೊಸೈಟಿ ಬಳಿ ತಡೆದು ನಿಲ್ಲಿಸಿ ಮೊಬೈಲ್ ಅನ್ನು ಕಸಿದು ಕಾರಿನಲ್ಲಿ ಕುಳ್ಳಿರಿಸಲು ಯತ್ನಿಸಿದ್ದರು. ಈ ವೇಳೆ ಮೊಹಮ್ಮದ್ ಶಿನಾಲ್ ತನ್ನ ಮೊಬೈಲ್ ಅನ್ನು ಎಳೆದು ತಪ್ಪಿಸಿಕೊಂಡು ತೆರಳಿದ್ದು, ಆರೋಪಿಗಳು ಅಲ್ಲಿಗೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಅಲ್ಲಿಗೆ ಬೈಕಿನಲ್ಲಿ ಬಂದಿದ್ದ ಇನ್ನೋರ್ವ ಆರೋಪಿ ಆಡನ್ ಕೂಡ ಸೇರಿಕೊಂಡಿದ್ದ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದಾಗ ಆಡನ್ ಪರಾರಿಯಾಗಿದ್ದು ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಪಿಲ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಉಳಿದ ಇಬ್ಬರು ಓಡಿ ಹೋಗಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…