ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಹಾಗೂ ಸಹಕಾರ ಶಿಕ್ಷಣ, ತರಬೇತಿಯ ಪರಿಷ್ಕರಣೆ ದಿನ, ಸೊಸೈಟಿಯ ನವೀಕೃತ ಹವಾನಿಯಂತ್ರಿತ ಸಭಾಂಗಣ ಉದ್ಘಾಟನೆ, ಸನ್ಮಾನ ಮತ್ತು ಕೃಷಿ ಸಹಾಯಧನ ವಿತರಣಾ ಸಮಾರಂಭವು ಪಡುಬಿದ್ರಿ ಸಹಕಾರ ಸಂಗಮ ವೈ ಲಕ್ಷ್ಮಣ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನವೀಕೃತ ಹವಾ ನಿಯಂತ್ರಿತ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕಯ್ ಶೆಟ್ಟಿ ಇಂದ್ರಾಳಿ, ಬೆಳಪು ಸರಕಾರಿ ಮಹಾಮಂಡಲದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ ವೈ, ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…