ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರು ಬಳಿ ಪಲ್ಟಿಯಾದ ಘಟನೆ ಶುಕ್ರವಾರ (ಸೆ.04)ಸಂಭವಿಸಿದೆ.
ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಉಳಿದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಕಾರ್ಕಳದಿಂದ ಹೊರಟಿದ್ದ ಬಸ್ಸು ಪಣಂಬೂರಿನ ಎಂಸಿಎಫ್ ಸಂಸ್ಥೆಯ ಸಮೀಪ ತಲುಪುತ್ತಿದ್ದಂತೆ, ಬಸ್ಸಿನ ಚಕ್ರವು ರಸ್ತೆ ಬದಿಯ ಚರಂಡಿಗೆ ಇಳಿದಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಸರ್ವಿಸ್ ಭಾಗಕ್ಕೆ ಮಗುಚಿ ಬಿದ್ದಿದೆ.
ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ದಟ್ಟನೆ ಉಂಟಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶ್ರೀನಗರ : ಪಾರ್ಕಿಂಗ್ ಮಾಡುವ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ; ತಪ್ಪಿದ ಭಾರೀ ಅವಘಡ ಶ್ರೀನಗರ: ನವಿ…
ವಿಜಯ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ ಬೆಂಗಳೂರು: ನಟ ದುನಿಯಾ…
ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ…
ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…
ಮಂಗಳೂರು: ಫಳ್ನೀರ್ ನಲ್ಲಿರುವ ಬ್ಲಿಂಕ್ ಇಟ್ ಮಳಿಗೆಗೆ ಅರೋಗ್ಯ ಇಲಾಖೆ ದಾಳಿ ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್ ಮಾಡಿದ…
ಉಡುಪಿ ಪಿ.ಒ.ಪಿ / ರಾಸಾಯನಿಕ ಬಳಸಿ ಗಣೇಶ ವಿಗ್ರಹಗಳ ತಯಾರಿ, ಮಾರಾಟ ನಿಷೇಧ ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ…