Featured

ಪಣಂಬೂರು: ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವು; ಆರೋಪಿಯ ಬಂಧನ – vishwanews24

ಪಣಂಬೂರು: ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವು; ಆರೋಪಿಯ ಬಂಧನ

ಪಣಂಬೂರು: ಇಲ್ಲಿನ ಬೀಚ್‌ನಲ್ಲಿ ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವುಗೈದ‌ ಅಪ್ರಾಪ್ತ‌ವಯಸ್ಕ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ಕಳವು ಗೈಯ್ಯಲಾಗಿದ್ದ 12 ಗ್ರಾಂ ತೂಕದ ಚೈನ್, 2 ಗ್ರಾಂ ತೂಕದ ಲಾಕೆಟ್, ತಲಾ 2 ಗ್ರಾಂ ತೂಕದ ಎರಡು ಉಂಗುರ ಮತ್ತು 4 ಗ್ರಾಂ ತೂಕದ ಕಿವಿಯೋಲೆ ಹಾಗೂ ರಿಯಲ್‌ಮಿ ಕಂಪೆನಿಯ ಮೊಬೈಲ್ ಪೋನ್-1, ಸ್ಯಾಂಸಂಗ್ S24 ಅಲ್ಟ್ರಾ ಮೊಬೈಲ್ ಪೋನ್-1 ಸೇರಿ‌ ಒಟ್ಟು 3.33 ಲಕ್ಷ‌ ರೂ.ಮೌಲ್ಯದ‌ ಸೊತ್ತನ್ನು ಪೊಲೀಸರು ವಶಕ್ಕೆ‌ ಪಡೆದುಕೊಂಡಿದ್ದಾರೆ.

ಸ್ವಾತಿ ನಂದಿಪಳ್ಳಿ ಎಂಬವರು ತನ್ನ ಸ್ನೇಹಿತ ರೋಹಿತ್ ವೆಮ್ಮಲೆಟ್ಟಿ ರವರೊಂದಿಗೆ ಬೆಳಿಗ್ಗೆ ಪಣಂಬೂರು ಬೀಚಿಗೆ ಬಂದವರು ಕಪ್ಪು ಬಣ್ಣದ ಬ್ಯಾಗ್ ವೊಂದರಲ್ಲಿ ಮೊಬೈಲ್‌‌ ಫೋನ್‌ಗಳು, ಚಿನ್ನಾಭರಣಗಳನ್ನು ಹಾಕಿ ಸಮುದ್ರ ತೀರದಲ್ಲಿಟ್ಟು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ‌ ಯಾರೋ ಕಳ್ಳ ಬ್ಯಾಗ್‌ ಸಮೇತ ಚಿನ್ನಾಭರಣ ಮೊಬೈಲ್ ಕಳವುಗೈದಿದ್ದಾಗಿ ಸ್ವಾತಿ‌ ಅವರು ಪಣಂಬೂರು ಪೊಲೀಸ್ ಠಾಣೆಯಲ್ಲಿ ನ.24ರಂದು ದೂರು ನೀಡಿದ್ದರು.

ಕಾರ್ಯಾಚರಣೆ‌ ನಡೆಸಿದ ಪಣಂಬೂರು ಪೊಲೀಸರು 48ಗಂಟೆಯ ಒಳಗಾಗಿ ಕಳ್ಳನನ್ನು ಬಂಧಿಸಿ, ಕಳವಾಗಿದ್ದ ಸಂಪೂರ್ಣ ಸೊತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ಪತ್ತೆ ಕಾರ್ಯಾಚರಣೆಯನ್ನು ಮಂಗಳೂರು ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಕೆ.ರವಿಶಂಕರ್, ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಕಾಂತ ಕೆ. ಅವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್, ಪಣಂಬೂರು ಪೊಲೀಸ್ ಉಪ ನಿರೀಕ್ಷರಾದ ಜ್ಞಾನಶೇಖರ, ಶ್ರೀಕಲಾ ಹಾಗೂ ಸಿಬ್ಬಂದಿಗಳಾದ ಸಿ.ಎಚ್.ಸಿ. ಸಯ್ಯದ್ ಇಮ್ತಿಯಾಝ್‌, ಪಿ.ಸಿ.ಗಳಾದ ರಾಕೇಶ್ ಮತ್ತು ಶರಣಬಸವ ಅವರು ಭಾಗವಹಿಸಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

13 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

16 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

16 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

16 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

16 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

17 hours ago