ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಫೆ. 24ರಂದು ನೀರಾಟವಾಡುತ್ತಿದ್ದಾಗ ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ.
ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು, ಧನಪಾಲ್ ಸಾಲ್ಯನ್ ಅವರು ದಡಕ್ಕೆ ಎಳೆದು ತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತುಕಾರಾಮ್ ಶಾಲೆ ಬಿಟ್ಟ ಬಳಿಕ ಸ್ನೇಹಿತ ಮಾರುತಿ ಜತೆ ಪಣಂಬೂರು ಬೀಚ್‌ಗೆ ಆಗಮಿಸಿ ನೀರಾಟದಲ್ಲಿ ತೊಡಗಿದ್ದ. ಆದರೆ ಈ ವೇಳೆ ಬೃಹತ್ ಅಲೆಗೆ ಕೊಚ್ಚಿ ಹೋಗಿದ್ದ. ಬೀಚ್‌ನಲ್ಲಿದ್ದ ಇತರರು ವಿದ್ಯಾರ್ಥಿ ಮುಳುಗುತ್ತಿರುವುದನ್ನು ಕಂಡು ಬೀಚ್‌ನ ರಕ್ಷಣ ದಳಕ್ಕೆ ತಿಳಿಸಿದ್ದರು. ತತ್‌ಕ್ಷಣ ಜೆಟ್ ಸ್ಕೀ ಮೂಲಕ ಕಾಪಾಡಲು ಯತ್ನಿಸಿದರೂ ಆತನ ಸುಳಿವು ಸಿಕ್ಕಿರಲಿಲ್ಲ
ಬಾಲಕ ಉತ್ತರ ಕರ್ನಾಟಕ ಮೂಲದವರಾಗಿದ್ದು, ಕೆಲಸದ ನಿಮಿತ್ತ ಬಂದಿದ್ದ ಇವರ ಪೋಷಕರು ಬೈಕಂಪಾಡಿ ಮೀನಕಳಿಯ ಬಳಿ ವಾಸವಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…