Featured

ಪಣಜಿ : ಸೊನಾಲಿ ಪೋಗಟ್ ಸಾವು ಪ್ರಕರಣ ; ಇಬ್ಬರು ಸಹಾಯಕರ ಬಂಧನ – Vishwanews24

ಸೊನಾಲಿ ಪೋಗಟ್ ಸಾವು ಪ್ರಕರಣ ; ಗೋವಾದಲ್ಲಿ ಇಬ್ಬರು ಸಹಾಯಕರ ಬಂಧನ

ಪಣಜಿ:ಹರ್ಯಾಣದ ಬಿಜೆಪಿ ನಾಯಕಿ ಟಿಕ್ ಟಾಕ್ ಸ್ಟಾರ್ ಸೊನಾಲಿ ಪೋಗಟ್ (42ವರ್ಷ) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊನಾಲಿಯ ಇಬ್ಬರು ಸಹಾಯಕರನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.

ಸೊನಾಲಿ ದೇಹದಲ್ಲಿ ಹಲವಾರು ಗಾಯದ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಉಲ್ಲೇಖಗೊಂಡ ಬೆನ್ನಲ್ಲೇ ಗೋವಾ ಪೊಲೀಸರು ಆಕೆಯ ಇಬ್ಬರು ಸಹಚರರ ಮೇಲೆ ಕೊಲೆ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದಿರುವುದಾಗಿ ವರದಿ ವಿವರಿಸಿದೆ.

ಸೊನಾಲಿ ಪೋಗಟ್ ಸಾವಿನ ಪ್ರಕರಣದಲ್ಲಿ ಆರೋಪಿಗಳಾದ ಸುಧೀರ್ ಸಾಗ್ವಾನ್ ಮತ್ತು ಸುಖ್ ವಿಂದರ್ ವಾಸಿಯನ್ನು ವಶಕ್ಕೆ ಪಡೆಯಲಾಗಿದೆ. ಪೋಗಟ್ ಅವರ ಸಹೋದರ ರಿಂಕು ಧಾಕಾ ಬುಧವಾರ ಅಂಜುನಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಗಳಾದ ಸಾಗ್ವಾನ್ ಮತ್ತು ವಾಸಿ ಹೆಸರನ್ನು ಉಲ್ಲೇಖಿಸಿದ್ದರು.

ಆಗಸ್ಟ್ 22ರಂದು ಗೋವಾಕ್ಕೆ ಪೋಗಟ್ ಆಗಮಿಸಿದ್ದ ವೇಳೆ ಸಾಗ್ವಾನ್ ಮತ್ತು ವಾಸಿ ಆಕೆಯ ಜತೆಗಿದ್ದರು. ಆಗಸ್ಟ್ 23ರಂದು ಪೋಗಟ್ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು. ಆದರೆ ಆಕೆಯ ಸಾವಿನ ಬಗ್ಗೆ ಮನೆಯವರು ಸಂಶಯ ವ್ಯಕ್ತಪಡಿಸಿ, ಇದೊಂದು ಕೊಲೆ ಎಂದು ಆರೋಪಿಸಿದ್ದರು.

ವಿಶ್ವಸಂಸ್ಥೆ: ಇದೇ ಮೊದಲ ಬಾರಿಗೆ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ – Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago