Featured

ಪತಿಗೆ ಅಕ್ರಮ ಸಂಬಂಧ : ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಅಕ್ರಮ ಸಂಬಂಧ : ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ 5 ವರ್ಷದ ಮಗಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ  ಬಗಲಗುಂಟೆಯಲ್ಲಿ  ನಡೆದಿದೆ.

ಶೃತಿ (33) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಪಾವಘಡದ ಗುಂಡಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದ ಶೃತಿ ಮಗಳು ರೋಶಿಣಿಯನ್ನು (5) ಫ್ಯಾನ್‌ಗೆ ನೇಣು ಹಾಕಿ ಬಳಿಕ ಅದೇ ಫ್ಯಾನಿಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ, ಈ ಹಿಂದೆ ಪಂಚಾಯತ್ ಕಚೇರಿಯಲ್ಲಿ ಆಡಿಟಿಂಗ್ ಕೆಲಸ ಮಾಡುತ್ತಿದ್ದ ಗೋಪಾಲಕೃಷ್ಣನನ್ನ ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಭಾನುವಾರ ಸಂಜೆ ಪತಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಮನೆಯ ಹೊರಗಡೆ ಆಟವಾಡುತ್ತಿದ್ದ. ಮಗ ಮನೆಯೊಳಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶೃತಿ ಡೆತ್ ನೋಟ್ ಬರೆದಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago