Featured

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ

ಹಾವೇರಿ: ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಬೇಸತ್ತು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ರಾಣೇಬೆನ್ನೂರು ನಗರದ ಇಸ್ಲಾಂಪುರ ಓಣಿಯಲ್ಲಿ ನಡೆದಿದೆ.

ಸೀಮಾ ಭಾನು ಕಂಬಳಿ (25) ಆತ್ಮಹತ್ಯೆಗೆ ಶರಣಾದ ಮಹಿಳೆ. ಪತಿ ಅಬ್ರಾರ ಕಂಬಳಿ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಅಲ್ಲದೇ ಪತಿ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣಿಗಾಗಿ ಮಹಿಳೆಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕಿರುಕುಳ ತಾಳದೆ ಸೀಮಾ 10 ದಿನದ ಹಿಂದೆ ವಿಷ ಸೇವಿಸಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಇಂದು (ಜು.10) ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ:

ಕಳೆದ ಮೂರು ವರ್ಷಗಳ ಹಿಂದೆ ಅದ್ದೂರಿಯಾಗಿ ಸೀಮಾ ಭಾನು ಕಂಬಳಿಯನ್ನು ಅಬ್ರಾರನಿಗೆ ಮದುವೆ ಮಾಡಿಕೊಡಲಾಗಿತ್ತು. ಆಗಿಂದಲೂ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.ಈ ಸಂಬಂಧ 6 ಜನರ ವಿರುದ್ಧ ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸುವಂತೆ ಮಹಿಳೆಯ ಪೋಷಕರು ಒತ್ತಾಯಿಸಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

2 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

2 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

2 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

2 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

3 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

3 hours ago