Featured

ಪತಿಯ IPL ಬೆಟ್ಟಿಂಗ್‌ ದಂಧೆ : 1.5 ಕೋಟಿ ರೂಪಾಯಿ ಸಾಲ -ನೊಂದ ಹೆಂಡತಿ ಆತ್ಮಹತ್ಯೆಗೆ ಶರಣು – Vishwanews24

ಪತಿಯ IPL ಬೆಟ್ಟಿಂಗ್‌ ದಂಧೆ : 1.5 ಕೋಟಿ ರೂಪಾಯಿ ಸಾಲ -ನೊಂದ ಹೆಂಡತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪತಿಯು ಆನ್‌ಲೈನ್‌ ಕ್ರಿಕೆಟ್‌ ಬೆಟ್ಟಿಂಗ್‌ ಗೀಳಿನಿಂದಾಗಿ 1 ಕೋಟಿ ರೂ. ಕಳೆದುಕೊಂಡಿದ್ದರಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ  ನಡೆದಿದೆ.

ಹೊಸದುರ್ಗದ ಸಣ್ಣ ನೀರಾವರಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್‌ ಆಗಿರುವ ದರ್ಶನ್‌ ಬಾಬು ಪತ್ನಿ ರಂಜಿತಾ (24) ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಐಪಿಎಲ್‌ಗಾಗಿ ಬೆಟ್ಟಿಂಗ್‌ಗೀಳಿಗೆ ಸಿಲುಕಿದ್ದ ದರ್ಶನ್‌ ಬಾಬು 1.5 ಕೋಟಿ ರೂ.ಗೂ ಅಧಿಕ ಸಾಲ ಮಾಡಿದ್ದ. ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ.

ಹೊಳಲ್ಕೆರೆಯ ಮನೆಯ ಬೆಡ್‌ರೂಂ ನಲ್ಲಿ ಮಾ.19 ರಂದು ರಂಜಿತಾಳ ಮೃತದೇಹ ಪತ್ತೆಯಾಗಿದೆ. ತನ್ನ ಈ ನಿರ್ಧಾರಕ್ಕೆ ಸಾಲ ನೀಡಿದ ವ್ಯಕ್ತಿಯೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಆಕೆ ಬರೆದಿದ್ದಾಳೆ. ಪ್ರಕರಣ ಸಂಬಂಧ ರಂಜಿತಾ ತಂದೆ ತನ್ನ ಅಳಿಯನಿಗೆ ಕಾನೂನುಬಾಹಿರವಾಗಿ ಸಾಲ ನೀಡಿರುವ 13 ಮಂದಿ ವಿರುದ್ಧ ದೂರು ನೀಡಿದ್ದಾರೆ.

ದರ್ಶನ್‌ 2021 ರಿಂದ 2023 ರ ವರೆಗೆ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಹಣ ಹಾಕಿ ಎಲ್ಲವನ್ನೂ ಕಳೆದುಕೊಂಡಿದ್ದ. ಕ್ರಿಕೆಟ್‌ ಬೆಟ್ಟಿಂಗ್‌ಗೆ ಐಡಿಯಾ ಜೊತೆ ಹಣ ಕೊಟ್ಟವರು ಹಣ ಹಿಂದಿರುಗಿಸುವಂತೆ ದಂಪತಿಗೆ ಕಿರುಕುಳ ನೀಡುತ್ತಿದ್ದರು. ದರ್ಶನ್‌ 54 ಲಕ್ಷ ರೂ. ಸಾಲ ಹಿಂದಿರುಗಿಸಲು ಬಾಕಿ ಇದೆ ಎಂದು ರಂಜಿತಾ ತಂದೆ ಆರೋಪಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago