ಬೆಂಗಳೂರು: ಪತಿಯು ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಗೀಳಿನಿಂದಾಗಿ 1 ಕೋಟಿ ರೂ. ಕಳೆದುಕೊಂಡಿದ್ದರಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಹೊಸದುರ್ಗದ ಸಣ್ಣ ನೀರಾವರಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿರುವ ದರ್ಶನ್ ಬಾಬು ಪತ್ನಿ ರಂಜಿತಾ (24) ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಐಪಿಎಲ್‌ಗಾಗಿ ಬೆಟ್ಟಿಂಗ್‌ಗೀಳಿಗೆ ಸಿಲುಕಿದ್ದ ದರ್ಶನ್ ಬಾಬು 1.5 ಕೋಟಿ ರೂ.ಗೂ ಅಧಿಕ ಸಾಲ ಮಾಡಿದ್ದ. ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ.
ಹೊಳಲ್ಕೆರೆಯ ಮನೆಯ ಬೆಡ್‌ರೂಂ ನಲ್ಲಿ ಮಾ.19 ರಂದು ರಂಜಿತಾಳ ಮೃತದೇಹ ಪತ್ತೆಯಾಗಿದೆ. ತನ್ನ ಈ ನಿರ್ಧಾರಕ್ಕೆ ಸಾಲ ನೀಡಿದ ವ್ಯಕ್ತಿಯೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಆಕೆ ಬರೆದಿದ್ದಾಳೆ. ಪ್ರಕರಣ ಸಂಬಂಧ ರಂಜಿತಾ ತಂದೆ ತನ್ನ ಅಳಿಯನಿಗೆ ಕಾನೂನುಬಾಹಿರವಾಗಿ ಸಾಲ ನೀಡಿರುವ 13 ಮಂದಿ ವಿರುದ್ಧ ದೂರು ನೀಡಿದ್ದಾರೆ.
ದರ್ಶನ್ 2021 ರಿಂದ 2023 ರ ವರೆಗೆ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಹಣ ಹಾಕಿ ಎಲ್ಲವನ್ನೂ ಕಳೆದುಕೊಂಡಿದ್ದ. ಕ್ರಿಕೆಟ್ ಬೆಟ್ಟಿಂಗ್‌ಗೆ ಐಡಿಯಾ ಜೊತೆ ಹಣ ಕೊಟ್ಟವರು ಹಣ ಹಿಂದಿರುಗಿಸುವಂತೆ ದಂಪತಿಗೆ ಕಿರುಕುಳ ನೀಡುತ್ತಿದ್ದರು. ದರ್ಶನ್ 54 ಲಕ್ಷ ರೂ. ಸಾಲ ಹಿಂದಿರುಗಿಸಲು ಬಾಕಿ ಇದೆ ಎಂದು ರಂಜಿತಾ ತಂದೆ ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…