ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಗೆ , ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಸ್ಪಷ್ಟವಾಗಿದ್ದು, ಈ ಮಧ್ಯೆಯೇ ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಕುಟುಂಬ ರಾಜಕಾರಣದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಅತ್ತ ಸಚಿವ ರೇವಣ್ಣ ಮಾತ್ರ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ’ಪತಿ ಅಂಬರೀಷ್ ಸತ್ತು ಇನ್ನು ಒಂದೆರಡು ತಿಂಗಳಾಗಿಲ್ಲ. ಇಂತಹ ಸಂದರ್ಭದಲ್ಲಿ ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತು’ ಎಂದು ಅವರು ನಟಿ ಸುಮಲತಾ ವಿರುದ್ದ ವಾಗ್ದಳಿ ನಡೆಸಿದ್ದಾರೆ.
ಅಂಬರೀಷ್ ಅವರು ಮೃತಪಟ್ಟಾಗ ,ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮನೆಯ ಸದಸ್ಯರಂತೆ ಮುಂದೆ ನಿಂತು ಜವಬ್ದಾರಿ ನಿಭಾಯಿಸಿ, ಕಂಬನಿ ಮಿಡಿದಿದ್ದರು. ಇದ್ಯಾವುದನ್ನು ಪರಿಗಣಿಸದೆ ಚುನಾವಣೆ ಸ್ಪರ್ಧೆ ಮಾಡುವುದಾಗಿ ಹೇಳಿ ಸುಮಲತಾ , ಜೆಡಿಎಸ್ ಗೆ ಸವಾಲು ಹಾಕಿದ್ದಾರೆ ’ ಎಂದು ಅಸಮಧಾನ ವ್ಯಕ್ತಪಡಿಸಿದರು. ಇದೀಗ ಸುಮಲತಾ ಅವರ ಸವಾಲ್ ನ್ನು ಸ್ವೀಕರಿಸುವಂತೆ ಅನಿವಾರ್ಯ ಸೃಷ್ಟಿ ಆಗಿದೆ ಎಂದ ರೇವಣ್ಣ ವಿವರಿಸಿದರು.
ಇದಕ್ಕೂ ಮೊದಲು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆ ಬಗ್ಗೆ ಆಲೋಚನೆ ಇರಲಿಲ್ಲ. ಕೃತಜ್ಞತೆ ಲವಲೇಶವೂ ಇಲ್ಲದ ಸುಮಲತಾ ಅವರ ಸವಾಲನ್ನು ಸ್ವೀಕರಿಸಿಯೇ ಸ್ಪರ್ಧೆಯ ವಿಚಾರ ಮಾಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…