Featured

ಪತಿ ಅಂಬರೀಷ್ ಸತ್ತು ಇನ್ನು ಒಂದೆರಡು ತಿಂಗಳಾಗಿಲ್ಲ , ಇಂತಹ ಸಂದರ್ಭದಲ್ಲಿ ಸುಮಲತಾ ಅವರಿಗೆ ರಾಜಕೀಯ ಬೇಕಿತ್ತಾ? :ಸಚಿವ ರೇವಣ್ಣ – Vishwanews24

ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಗೆ , ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಸ್ಪಷ್ಟವಾಗಿದ್ದು,  ಈ ಮಧ್ಯೆಯೇ ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್‌ ಕುಟುಂಬ ರಾಜಕಾರಣದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಅತ್ತ ಸಚಿವ ರೇವಣ್ಣ ಮಾತ್ರ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ’ಪತಿ ಅಂಬರೀಷ್ ಸತ್ತು ಇನ್ನು ಒಂದೆರಡು ತಿಂಗಳಾಗಿಲ್ಲ. ಇಂತಹ ಸಂದರ್ಭದಲ್ಲಿ ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತು’ ಎಂದು ಅವರು ನಟಿ ಸುಮಲತಾ ವಿರುದ್ದ ವಾಗ್ದಳಿ ನಡೆಸಿದ್ದಾರೆ.

ಅಂಬರೀಷ್ ಅವರು ಮೃತಪಟ್ಟಾಗ ,ಮುಖ್ಯಮಂತ್ರಿ ಎಚ್‌.ಡಿ. ‌ಕುಮಾರಸ್ವಾಮಿ ಅವರ ಮನೆಯ ಸದಸ್ಯರಂತೆ ಮುಂದೆ ನಿಂತು ಜವಬ್ದಾರಿ ನಿಭಾಯಿಸಿ, ಕಂಬನಿ ಮಿಡಿದಿದ್ದರು. ಇದ್ಯಾವುದನ್ನು ಪರಿಗಣಿಸದೆ ಚುನಾವಣೆ ಸ್ಪರ್ಧೆ ಮಾಡುವುದಾಗಿ ಹೇಳಿ ಸುಮಲತಾ , ಜೆಡಿಎಸ್ ಗೆ ಸವಾಲು ಹಾಕಿದ್ದಾರೆ ’ ಎಂದು ಅಸಮಧಾನ ವ್ಯಕ್ತಪಡಿಸಿದರು. ಇದೀಗ ಸುಮಲತಾ ಅವರ ಸವಾಲ್ ನ್ನು ಸ್ವೀಕರಿಸುವಂತೆ ಅನಿವಾರ್ಯ ಸೃಷ್ಟಿ ಆಗಿದೆ ಎಂದ ರೇವಣ್ಣ ವಿವರಿಸಿದರು.

ಇದಕ್ಕೂ ಮೊದಲು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆ ಬಗ್ಗೆ ಆಲೋಚನೆ‌ ಇರಲಿಲ್ಲ. ಕೃತಜ್ಞತೆ ಲವಲೇಶವೂ ಇಲ್ಲದ ಸುಮಲತಾ ಅವರ ಸವಾಲನ್ನು ಸ್ವೀಕರಿಸಿಯೇ ಸ್ಪರ್ಧೆಯ ವಿಚಾರ ಮಾಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago