ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು.
ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.
ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…